ಮೈಸೂರು: 76 ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ನಗರದ ಪಂಜಿನ ಕವಾಯತು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, ಗೃಹ ರಕ್ಷಕ ದಳ, ಅಬಕಾರಿ ಇಲಾಖೆ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿದ ಶಾಲಾ ಕಾಲೇಜುಗಳ ಮಕ್ಕಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಸಚಿವರು ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾದ ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಐ ಜಿ ಪಿ ಬೋರಲಿಂಗಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.