Mysore
25
clear sky

Social Media

ಬುಧವಾರ, 28 ಜನವರಿ 2026
Light
Dark

ಕಬ್ಬಿನ ಬಾಕಿ ಹಣ ಕೊಡಿಸುವಂತೆ ಸಿಎಂಗೆ ಮನವಿ

JDS weak party : CM siddaramaiah

ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಕರ್ನಾಟಕ ಆಡಳಿತ ಹೇಮಾವತಿ ಸಭಾಂಗಣದ ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರ ಸಮಸ್ಯೆಗಳ ಬಗೆಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯಲ್ಲಿ ಸುಮಾರು 1500 ಹೆಕ್ಟೇರ್‌ಗೂ ಹೆಚ್ಚು ಬಾಳೆ ಬೆಳೆಗಾರರಿಗೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಎಂದು ಹೇಳಿ ತಡ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ಸರಿಪಡಿಸಿ ಸುಮಾರು 40, 50 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.

ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಪಿ.ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ಕುರುಬೂರು ಸಿದ್ದೇಶ್, ವಿಜಯೇಂದ್ರ, ವರಕೋಡು ನಾಗೇಶ್, ಕುರುಬೂರು ಪ್ರದೀಪ್, ಬನ್ನೂರು ಸೂರಿ, ವಾಜಮಂಗಲ ಮಹದೇವು, ಪರಶಿವಮೂರ್ತಿ, ಕಿರಗಸೂರು ಪ್ರಸಾದ್ ನಾಯಕ, ಪಟೇಲ್ ಶಿವಮೂರ್ತಿ, ಹೆಗ್ಗೊಠಾರ ಶಿವಸ್ವಾಮಿ, ಮಹದೇವ ಸ್ವಾಮಿ, ಶಿವಣ್ಣ, ಪುಟ್ಟಸ್ವಾಮಿ, ಸಿದ್ದರಾಮ, ಕಾಟೂರು ನಾಗೇಶ್, ಮಹದೇವಸ್ವಾಮಿ, ಸೋಮಣ್ಣ, ನವೀನ, ನಂಜುಂಡಸ್ವಾಮಿ, ಮಾದೇಶ, ಉಮೇಶ, ಮಹೇಶ, ದೇವನೂರು ಮಹದೇವಸ್ವಾಮಿ, ಕೆ.ನಾಗರಾಜ, ಮಹದೇವಪ್ಪ, ವೆಂಕಟೇಶ್ ಮತ್ತಿತರರು ಹಾಜರಿದ್ದರು.

Tags:
error: Content is protected !!