JDS weak party : CM siddaramaiah
ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಕರ್ನಾಟಕ ಆಡಳಿತ ಹೇಮಾವತಿ ಸಭಾಂಗಣದ ಬಳಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜಿಲ್ಲೆಯ ರೈತರ ಸಮಸ್ಯೆಗಳ ಬಗೆಗೆ ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯಲ್ಲಿ ಸುಮಾರು 1500 ಹೆಕ್ಟೇರ್‌ಗೂ ಹೆಚ್ಚು ಬಾಳೆ ಬೆಳೆಗಾರರಿಗೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ ನೀಡಲು ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಎಂದು ಹೇಳಿ ತಡ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೇ ಇದನ್ನು ಸರಿಪಡಿಸಿ ಸುಮಾರು 40, 50 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.
ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಪಿ.ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ಕುರುಬೂರು ಸಿದ್ದೇಶ್, ವಿಜಯೇಂದ್ರ, ವರಕೋಡು ನಾಗೇಶ್, ಕುರುಬೂರು ಪ್ರದೀಪ್, ಬನ್ನೂರು ಸೂರಿ, ವಾಜಮಂಗಲ ಮಹದೇವು, ಪರಶಿವಮೂರ್ತಿ, ಕಿರಗಸೂರು ಪ್ರಸಾದ್ ನಾಯಕ, ಪಟೇಲ್ ಶಿವಮೂರ್ತಿ, ಹೆಗ್ಗೊಠಾರ ಶಿವಸ್ವಾಮಿ, ಮಹದೇವ ಸ್ವಾಮಿ, ಶಿವಣ್ಣ, ಪುಟ್ಟಸ್ವಾಮಿ, ಸಿದ್ದರಾಮ, ಕಾಟೂರು ನಾಗೇಶ್, ಮಹದೇವಸ್ವಾಮಿ, ಸೋಮಣ್ಣ, ನವೀನ, ನಂಜುಂಡಸ್ವಾಮಿ, ಮಾದೇಶ, ಉಮೇಶ, ಮಹೇಶ, ದೇವನೂರು ಮಹದೇವಸ್ವಾಮಿ, ಕೆ.ನಾಗರಾಜ, ಮಹದೇವಪ್ಪ, ವೆಂಕಟೇಶ್ ಮತ್ತಿತರರು ಹಾಜರಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…