ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು
ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡದಿ ಅವರು, ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ಬರುವುದಿಲ್ಲ ಎಂದ ಅವರು ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದರು. ಮಳೆಯಿಂದಾಗಿ ನಂಜನಗೂಡು ತಾಲ್ಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು ಎಂದರು.
ಅಧಿಕ ಮಳೆಯಾದ ಸಂದರ್ಭದಲ್ಲಿ ನೀರಿನ ಟ್ಯಾಂಕ್ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಹರಿಯುವುದನ್ನು ತಡೆಗಟ್ಟಲು ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರು ಕಲುಷಿತವಾಗಬಾರದು ಎಂದು ನಿರ್ದೇಶನ ನೀಡಿದರು.
ನಿರೀಕ್ಷೆಗಿಂತ ಹೆಚ್ಚು ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಸಂದರ್ಭದಲ್ಲಿ ಬಿತ್ತನೆ ಸಿದ್ಧತೆಯಲ್ಲಿರುವ ರೈತರಿಗೆ ಯಾವುದೇ ಸಮಸ್ಯೆ ಉಂಟಾಗಬಾರದು. ಅಗತ್ಯವಿರುವಷ್ಟು ಬಿತ್ತನಿ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚನೆ ನೀಡಿದರು.
ಪೊಟಾಸಿಯಂ ಬಳಕೆ ಹೆಚ್ಚಾದಷ್ಟು ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತದೆ. ಇದನ್ನು ಕಡಿಮೆ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ವಾಜಮಂಗಲ, ಸಿಂಧೂವಳ್ಳಿ ಹಾಗೂ ಉಲ್ಲಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಅಹಿತರ ಘಟನೆಗಳು ಸಂಭವಿಸಬಾರದು. ಈ ಸಂಬಂಧ ಪೊಲೀಸ್ ಇಲಾಖೆಯು ಕಟ್ಟೆಚ್ಚರವಹಿಸಬೇಕು. ಬಾಬಾಸಾಹೇಬರು ಅವರಂತಹ ಮಹನೀಯರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಯಾರಿಂದಲೂ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕ್ರಮವಹಿಸಬೇಕು. ಹೋರಾಟ, ಪ್ರತಿಭಟನೆಗಳು ಕಾನೂನಿನ ಪ್ರಕಾರ ಶಾಂತಿಯುತವಾಗಿ ನಡೆಯಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗಬಾರದು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು. ಕೋವಿಡ್ ಲಕ್ಷಣಗಳ ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕಚೇರಿಯಲ್ಲಿ ಕೂರಬಾರದು. ಸಮಸ್ಯೆ ಕಾಣಿಸಿಕೊಂಡ ಸ್ಥಳಕ್ಕೆ ಭೇಟಿ ನೀಡಬೇಕು. ಜನರ ನಡುವೆ ಇದ್ದುಕೊಂಡು ಸರ್ಕಾರವು ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ನಗರಪಾಲಿಕೆ ಉಪ ಆಯುಕ್ತ ಸೋಮಶೇಖರ್, ಡಿಸಿಪಿ ಕೆ.ಎಸ್.ಸುಂದರ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಎ.ಎಸ್.ರಂಜಿತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ, ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನೀಲ್ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…