ಮೈಸೂರು: ಯುವ ನಾಯಕ, ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಚಿತ್ರರಂಗದಿಂದ ನಿವೃತ್ತಿ ಪಡೆದಿದ್ದಾರೆಯೇ ಹೊರತು ರಾಜಕೀಯದಿಂದ ಅಲ್ಲ.
ರಾಜಕೀಯವಾಗಿ ಮತ್ತು ಪಕ್ಷ ಸಂಘಟನೆ ಉದ್ದೇಶದಿಂದ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯ ನಿವೃತ್ತಿ ಹೊಂದಿದ್ದಾರೆಂದು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಹೇಳಿದ್ದಾರೆಂದು ಕಣ್ತಪ್ಪಿನಿಂದ ಪ್ರಕಟವಾಗಿದ್ದು, ಅವರು ಚಿತ್ರರಂಗದಿಂದ ನಿವೃತ್ತಿಯಾಗಿದ್ದಾರೆ ಹೊರತು ರಾಜಕೀಯದಿಂದ ಅಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ದೇಶದ ತುಂಬಾ ಓಡಾಡಬೇಕು. ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಪಕ್ಷ ಸಂಘಟನೆಗೆ ಸಂಪೂರ್ಣವಾಗಿ ತೊಡಗಿಸಿಕೊಳ್ಳಲು ಚಿತ್ರರಂಗದಿಂದ ನಿವೃತ್ತಿ ಪಡೆದು ರಾಜಕೀಯದಲ್ಲಿ ಕೆಲಸ ಮಾಡುತ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಯುವಕರ ಐಕಾನ್ ಆಗಿದ್ದಾರೆ ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಅವರನ್ನೇ ಕಣಕ್ಕಿಳಿಸುವಂತೆ ಸ್ಥಳೀಯ ಮುಖಂಡರು,ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ.