ಮೈಸೂರು

ವೃತ್ತಿಗಷ್ಟೇ ನಿವೃತ್ತಿ ಹೊರತು ಜ್ಞಾನ ಮತ್ತು ಅನುಭವಕ್ಕಲ್ಲ: ಎಂ.ಕೆ.ಸೋಮಶೇಖರ್ ಅಭಿಮತ

ಮೈಸೂರು: ನೌಕರರಿಗೆ ವೃತ್ತಿಯಿಂದ ಮಾತ್ರ ನಿವೃತ್ತಿ ಆಗುತ್ತದೆ ಹೊರತು ಜ್ಞಾನ ಮತ್ತು ಅನುಭವಕ್ಕೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ  ವಿಶ್ರಾಂತ ಉದ್ಯೋಗಿಗಳ ಸಂಘ(ರಿ.) ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ (ರಿ.) ದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಜ್ಯೋತಿ ಬೆಳಗುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ನಿವೃತ್ತ ಸರ್ಕಾರಿ ನೌಕರರು ಎಂದರೆ ಹಲವಾರು ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಅನುಭವಿಗಳು. ನಿವೃತ್ತರ ಅನುಭವಗಳು ಇವತ್ತಿನ ನೌಕರರ ಕೆಲಸ ಕಾರ್ಯಗಳಿಗೆ ತಳಹದಿಯಾಗುತ್ತದೆ.  ಇವರ ನೌಕರಿಗೆ ವೃತ್ತಿಯಷ್ಟೆ ಹೊರತು ಅವರ ಅನುಭವಕ್ಕಲ್ಲ. ಅವರ ಅನುಭವಗಳನ್ನು ಇತರ ನೌಕರರಿಗೆ ಧಾರೆಯೆರಯ ಬೇಕು ಎಂದರು.

ಸರ್ಕಾರಿ ನೌಕರರು ತಮ್ಮ ವೃತ್ತಿಯುದ್ದಕ್ಕೂ ಇಡೀ ರಾಜ್ಯದ ವಿವಿಧ ಇಲಾಖೆಗಳಲ್ಲಿ, ವಿವಿಧ ಶ್ರೇಣಿಯಲ್ಲಿ ಕರ್ತವ್ಯ ನಿರ್ವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೊಡುಗೆ ನೀಡಿರುತ್ತಾರೆ. ಈ ಮೂಲಕ ಅವರು ಸಾಕಷ್ಟು ಅನುಭವ ಮತ್ತು ಅರಿವು ಸಂಪಾದಿಸಿರುತ್ತಾರೆ. ನಿವೃತ್ತರ ಸೇವೆ ಒಂದಲ್ಲ ಒಂದು ರೀತಿ ಸಮಾಜಕ್ಕೆ ಸಿಗುತ್ತಿರುತ್ತದೆ ಎಂದು ಹೇಳಿದರು.

ನೌಕರರು ನಿವೃತ್ತಿಯ ನಂತರವೂ ದೈಹಿಕ ಚಟುವಟಿಕೆಗಳನ್ನು ಮಾಡಿಕೊಂಡು ಸಧೃಡ ಆರೋಗ್ಯವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ ಅವರು  ನಿವೃತ್ತರ ಯಾವುದೇ ಸಮಸ್ಯೆಗಳಿಗೆ ದನಿಯಾಗುತ್ತೇನೆ ಎಂದು ಅಭಯ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದರಾಜು, ವಿಶ್ರಾಂತ ಉದ್ಯೋಗಿಗಳ ಸಂಘದ ಅಧ್ಯಕ್ಷ ಉಮಾಕಾಂತ್.ಬಿ.ಆರ್, ತಾಲೂಕು ಅಧ್ಯಕ್ಷರುಗಳಾದ ಸಣ್ಣಲಿಂಗಪ್ಪ , ಬಾಲಕೃಷ್ಣ, ಜೋಸೆಫ್ ಆರೋಕ್ಯ, ಎಂ.ಮಹದೇವಯ್ಯ, ಶಿವನಂಜೇಗೌಡ, ಗೋವಿಂದೇಗೌಡ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago