ಮೈಸೂರು : ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದ್ದು, ಬಿಡುಗಡೆಯಾಗುತ್ತಿದ್ದಂತೆ ಮೈಸೂರಿನ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಹಾಸನ ಮಹಿಳೆ ಕಿಡ್ನ್ಯಾಪ್ ಕೇಸ್‌ಗೆ ಸಂಬಂಧಿಸಿದಂತೆ ಹಚ್.ಡಿ.ರೇವಣ್ಣ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಬಿಡುಗಡೆಗೊಂಡ ರೇವಣ್ಣ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಂದು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಾ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಲೆ. ನಾನು ದೇವರ ಮೇಲೆ ನಂಬಿಕೆ ಇಟ್ಟಿರುವವನು. ತಾಯಿ ಚಾಮುಂಡೇಶ್ವರಿ ನನಗೆ ನ್ಯಾಯಾ ಕೊಡಿಸುತ್ತಾಳೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.
ಈ ವೇಳೆ ಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರಲ್ಲೂ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…