ಮೈಸೂರು

ಕುಕ್ಕರಹಳ್ಳಿ ಕೆರೆಗೆ ಕಾಯಕಲ್ಪ- ಜೂನ್ ಅಂತ್ಯದೊಳಗೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

ಮೈಸೂರು:  ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ತಿಳಿಸಿದರು.

ಇಂದು(ಮೇ.20) ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಕುಕ್ಕರಹಳ್ಳಿ ಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಳ್ಳಿ ಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು.

ಕುಕ್ಕರಳ್ಳಿ ಕೆರೆಯ ಸುತ್ತಲು ಇರುವ ಅನಧಿಕೃತ ಒಳ ಚರಂಡಿಗಳನ್ನು ಮುಚ್ಚಿಸಿ ಅಲ್ಲಿಂದ ಕೆರೆ ನೀರಿಗೆ ಬರುತ್ತಿದ್ದಂತಹ ಕೊಳಚೆ ನೀರನ್ನು ತಡೆಗಟ್ಟಬೇಕು. ಶುದ್ಧ ನೀರನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುಕ್ಕರಳ್ಳಿ ಕೆರೆಯ ವ್ಯಾಪ್ತಿಯಲ್ಲಿ ಕೆಲವೊಂದು ಕಡೆ ಕಸದ ರಾಶಿ ಕಂಡುಬರುತ್ತಿದ್ದು, ತಕ್ಷಣವೇ ಅದನ್ನು ತೆರವುಗೊಳಿಸಬೇಕು. ಆ ಸ್ಥಳಗಳಲ್ಲಿ ಪಾರ್ಕ್, ಕೂರಲು ಹಾಸನದ ವ್ಯವಸ್ಥೆ ಇತ್ಯಾದಿ ಉಪಯುಕ್ತ ಕೆಲಸಕ್ಕೆ ಬಳಸಿ ಸಾರ್ವಜನಿಕರಿಗೆ ಸಹಾಯವಾಗುವಂತೆ ಮಾರ್ಪಡಿಸಬೇಕು ಎಂದರು.

ಸುತ್ತ-ಮುತ್ತಲಿನ ಶಬ್ದ ಮಾಲಿನ್ಯದಿಂದ ಕೆರೆಯ ಒಳಗಿರುವ ಪ್ರಾಣಿ-ಪಕ್ಷಿಗಳಿಗೆ ತೊಂದರೆಯುಟೆಗುತ್ತಿದ್ದು, ಅದನ್ನು ತಡೆಯಲು ಸಾರ್ವಜನಿಕರಿಗೆ ಸೂಚನಾ ಫಲಕಗಳ ಮೂಲಕ ಮಾಹಿತಿ ನೀಡಿ ಶಬ್ದವನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಶುದ್ಧವಾದ ನೀರು, ಗಾಳಿ ಸಿಗುವಂತಹ ವಾತಾವರಣವನ್ನು ನಿರ್ಮಿಸಬೇಕು. ಕೆರೆಯೊಳಗೆ ಇರುವಂತಹ ಬೇಡದ ದೋಣಿಗಳನ್ನು ತೆರವುಗೊಳಿಸಬೇಕು. ಸಾರ್ವಜನಿಕರು ಕೆರೆಯೊಳಗೆ ಹೋಗದಂತೆ ನಿಗಾವಹಿಸಬೇಕು ಎಂದರು.

ಪರಿಣಿತರಿಂದ ಕುಕ್ಕರಹಳ್ಳಿ ಅಭಿವೃದ್ಧಿ ಸಂಬಂಧ ಯೋಜನೆ ಅನುಷ್ಠಾನಕ್ಕೆ ಕೈಗೊಳ್ಳಬಹುದಾದ ಕ್ರಮದ ಬಗ್ಗೆ ಸಲಹೆ ಸ್ವೀಕರಿಸಿ, ಈಗಾಗಲೇ ಕೈಗೊಂಡಿರುವ ಕ್ರಮಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಎನ್ ಎನ್ ಮಧು, ಮೂಡ ಆಯುಕ್ತರಾದ ದಿನೇಶ್, ಇಂಟ್ಯಾಕ್ ಸಂಸ್ಥೆಯ ಅಧಿಕಾರಿಗಳು, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು,ಮೈಸೂರು ಪರಂಪರೆ ಸಮಿತಿಯ ಸದಸ್ಯರು ಸೇರಿದಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಕ್ಕರಹಳ್ಳಿ ಕೆರೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

44 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

53 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago