ಮೈಸೂರು

ಕ್ರಾಂತಿಕಾರಿ ಹೋರಾಟಗಾರ ಅಂಬೇಡ್ಕರ್ ವಾದಿ ಮಂಟೇಲಿಂಗಯ್ಯ ನಿಧನ

ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.

ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯ ಕ್ರಿಯೆ ಮಂಗಳವಾರ ನಡೆಯಲಿದೆ.

ಬಡ ಜನರ ಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡಿದವರಲ್ಲಿ ಮುಂಚೂಣಿಗರು. ಅಧಿಕಾರಸ್ತರು, ಜನಪ್ರತಿನಿಧಿಗಳು ಮತ್ತು ಆಳುವ ಸರ್ಕಾರಕ್ಕೆ ಸಿಂಹ ಸ್ವಪ್ನ ರಾಗಿದ್ದ ಅವರು ಹೋರಾಟದ ಮೂಲಕವೇ ಸಮಾಜವನ್ನು ಎಚ್ಚರಿಸಿದ್ದರು.
ಸದಾ ಕಾಲ ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

1 min ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

10 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

11 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

11 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 hours ago