ಮೈಸೂರು : ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ದಂಪತಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.
ಚಂದ್ರ ಹಾಗೂ ಪೇಮ ಎಂಬ ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಘಟನಾ ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.