ಮೈಸೂರು

ಮೈಸೂರು | ರಸ್ತೆ ಬದಿ ಕಸದ ರಾಶಿ ; ಸಮಾಗಮ ವೆಲ್ಫೇರ್‌ ಸಂಸ್ಥೆಯಿಂದ ಅರಿವು ಕಾರ್ಯಗಾರ

ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ ಬದಿ ಕಸದ ರಾಶಿ ಹಾಗೂ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಬಗೆಹರಿಸಲು ಸಮಾಗಮ ವೆಲ್ಫೇರ್ ಸಂಸ್ಥೆಯು ಕ್ಲೀನ್ ಮೈಸೂರು ಸೇವ್ ಫ್ಯೂಚರ್ ಎಂಬ ಘೋಷವಾಕ್ಯದಡಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ  ಸಾರ್ವಜನಿಕರಲ್ಲಿ ಅರಿವು  ಮೂಡಿಸುತ್ತಿದೆ.

ಭಾನುವಾರ ವಿಜಯನಗರದ ಮೈಲಾರಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಭಿತ್ತಿ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಬಳಿಕ ಮಾತನಾಡಿದ ವಿಜಯನಗರ ನಿವಾಸಿಗಳ ಸಂಘದ ಅಧ್ಯಕ್ಷ ರಾಮಕೃಷ್ಣ ಗೌಡ, ಇತ್ತೀಚಿನ ದಿನಗಳಲ್ಲಿ ನಾಲ್ಕನೇ ಹಂತದಲ್ಲಿ ತ್ಯಾಜ್ಯದ ನಿರ್ವಹಣೆ ಸಮಸ್ಯೆಯು ಹೆಚ್ಚಾಗುತ್ತಿದ್ದು ನಗರಸಭೆಯ ಕಸ ಸಂಗ್ರಹಣ ವಾಹನ ಮನೆಯ ಬಳಿ ಬಂದರು ಕೆಲವರು ಸಾರ್ವಜನಿಕರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುತ್ತಿದ್ದಾರೆ ಎಂದು ಬೇಸರಿಸಿದರು.

ಹೀಗೆ ಎಲ್ಲೆಂದರಲ್ಲಿ ಕಸದ ರಾಶಿ ಎಸೆಯುವುದರಿಂದ ಮುಂಜಾನೆ ವಾಕಿಂಗ್ ಬರುವವರು ಮೂಗು ಮುಚ್ಚಿಕೊಂಡು ಓಡಾಡುವ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ನಿವಾಸಿಗಳು ಕಸವನ್ನು ಮನೆಯ ಬಳಿ ಬರುವ ಕಸದ ವಾಹನಕ್ಕೆ ಕಸ ನೀಡಿ ಎಂದು ಹೇಳಿದರು.

ಪರಿಸರ ಸಂರಕ್ಷಣೆ ದೃಷ್ಠಿಯಿಂದ ಸಮಾಗಮ ವೆಲ್ಫೇರ್ ಸಂಸ್ಥೆಯು ಇಂತಹ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರಸ್ತುತ ಅತ್ಯಾವಶ್ಯಕವಾಗಿದೆ. ನಮ್ಮ ಮೈಸೂರು ಸ್ವಚ್ಛ ಮೈಸೂರಗಲೂ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಬಳಿಕ ಮಾತನಾಡಿದ ಸಮಾಗಮ ವೆಲ್ಫೇರ್ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕ ಪಾಂಡು ಎಸ್, ಸಾರ್ವಜನಿಕರಲ್ಲಿನ ಪರಿಸರ ಕಾಳಜಿಯ ಕೊರತೆ ಹಾಗೂ ನಿರ್ಲಕ್ಷ ಮನೋಭಾವನೆಯಿಂದ ತ್ಯಾಜ್ಯದ ಸಮಸ್ಯೆ ಉಲ್ಬಣಗೊಳ್ಳುತ್ತಿದೆ, ಜಾಗೃತಿ ನೀಡುವ ಸಲುವಾಗಿ ಬಿತ್ತಿ ಪತ್ರಿಕೆಯನ್ನು ಪ್ರತಿ ಮನೆಮನೆಗೂ ತಲುಪಿಸಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಮುಂದಿನ ವಾರದೊಳೆಗೆ ಪ್ರತಿ ಮನೆ ಮನೆಗೂ ಭಿತ್ತಿ ಪತ್ರವನ್ನು ಹಂಚಿ, ಅರಿವು ಮೂಡಿಸಲಾಗುವುದು. ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು.  ನಮ್ಮ ಸುತ್ತಮುತ್ತಲಿನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಿವಾಸಿಗಳು ಭಾವಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪ್ರೊ. ಆನಂದ್, ನಿರ್ದೇಶಕ ಶಂಭುಲಿಂಗೇಗೌಡ, ಡಿ ಎಲ್ ಮಂಜುನಾಥ್, ಸದಸ್ಯರುಗಳಾದ ನಂಜುಂಡ, ನಿವೃತ್ತ ಡಿ.ವೈ.ಎಸ್.ಪಿ, ಡಾ. ಪುಟ್ಟಸ್ವಾಮಿ, ಪಾಂಡು, ರಾಜಶೇಖರ್ ಮತ್ತು ಸಮಾಗಮ ವೆಲ್ಫೇರ್ ಫೌಂಡೇಶನ್ ಸಂಸ್ಥೆಯ ನಿರ್ದೇಶಕರಾದ ಸುಮಿತ್ರ, ರಾಘವೇಂದ್ರ ಸ್ವಾಮಿ, ಶಿವಕುಮಾರ್ ಸ್ಥಳೀಯರಾದ ನಾರಾಯಣಸ್ವಾಮಿ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago