ಮೈಸೂರು

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ.
ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14 ರಿಂದ 16 ಅಂಗಡಿಗಳಲ್ಲಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನ ನಡೆದಿರುವ ಘಟನೆ ಕಳೆದ ತಡರಾತ್ರಿ ಸಂಭವಿಸಿದೆ.

ಪಟ್ಟಣ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಬಾಯ್ಸ್ ಮಿಡಲ್ ಶಾಲೆಯ ಆವರಣದಲ್ಲಿನ ಹಾಲಿನ ಡೈರಿಯಲ್ಲಿ ಸುಮಾರು 2 ಸಾವಿರ ರೂ. ನಗದು ಕಳ್ಳತನವಾಗಿದ್ದು, ಎದುರಿನ ಕೋಳಿ ಮಾರಾಟದ ಅಂಗಡಿಗಳಲ್ಲಿ ಇದ್ದ ಅಲ್ಪ ಪ್ರಮಾಣದ ಹಣವೂ ಕಳ್ಳರ ಪಾಲಾಗಿದೆ.

ಇದಲ್ಲದೆ, ನಾಲ್ಕನೇ ಕ್ರಾಸ್‌ನ ಅಪ್ಪು ಸ್ಟೋರ್, ಅಕ್ಷಯ ಫುಟ್‌ವೇರ್, 6ನೇ ಕ್ರಾಸ್‌ನ ಅಶ್ವಿನಿ ಬೇಕರಿ, ನಂಜುಂಡೇಶ್ವರ ಡಿಟಿಎಚ್ ಹಾಗೂ ವಿಡಿಯೋ ಅಂಗಡಿ ಸೇರಿದಂತೆ ಹಲವೆಡೆ ಬೀಗ ಮುರಿದು ಕಳ್ಳತನಕ್ಕೆ ಯತ್ನ ಮಾಡಲಾಗಿದೆ.
ಕೆಲವು ಅಂಗಡಿಗಳಲ್ಲಿ ಸರಕಿಗೆ ಹಾನಿಯಾಗಿರುವ ಮಾಹಿತಿ ದೊರೆತಿದೆ.

ಕಳ್ಳತನಕ್ಕೆ ಯತ್ನಿಸುತ್ತಿರುವ ಖದೀಮನ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಪೊಲೀಸ್ ಠಾಣೆಯ ಸಮೀಪದಲ್ಲೇ ಈ ರೀತಿಯ ಸರಣಿ ಕಳ್ಳತನ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಪಟ್ಟಣದಲ್ಲಿ ಭದ್ರತೆ ಹೆಚ್ಚಿಸುವಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

4 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

7 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

28 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

32 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

50 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

2 hours ago