ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಕಲಹ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 16ಕ್ಕೆ ಮುಂದೂಡಿದೆ. ಜೊತೆಗೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ತೆಗೆದು ಹಾಕಬಹುದು. ಆದರೆ ಘಟನೆಯಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಇದಕ್ಕಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದರು. ಆದ್ರೆ, ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿ ಮಾತನಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳ ಎದುರು ಹೇಳಿದ್ದಾರೆ ಎಂದು ಪ್ರತಿವಾದ ಮಂಡಿಸಿದರು.
ವಾದ ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿ ಎ.ಎಸ್.ಓಕಾ, ನೀವು ಒಂದು ನಿರ್ಧಾರಕ್ಕೆ ಬರಬೇಕು, ಇಬ್ಬರಿಗೂ ಉಜ್ವಲ ಭವಿಷ್ಯವಿದೆ ಎಂದು ಸಲಹೆ ನೀಡಿದರು.
ಬಳಿಕ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಓಕಾ ಅವರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 16ಕ್ಕೆ ಮುಂದೂಡಿದರು. ಆದರೆ, ಮಧ್ಯಂತರ ಆದೇಶ ಮುಂದುವರಿಸುವಂತೆ ಸೂಚನೆ ನೀಡಿದರು.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…