ಮೈಸೂರು

ಚಾಮುಂಡಿ ಬೆಟ್ಟಕ್ಕೆ ರೋಪ್‌-ವೇ ಅನಗತ್ಯ: ಚಾಮುಂಡಿ ಬೆಟ್ಟ ಉಳಿಸಿ ಸಮಿತಿ

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ.

ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಚಾಮುಂಡಿ ಬೆಟ್ಟ ಉಳಿಸಿ ಸಮಿತಿಯು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ.

ಬೆಟ್ಟಕ್ಕೆ ರೋಪ್ ವೇ ನಿರ್ವಾಣ ವಾಡುವ ಪ್ರಸ್ತಾಪ ರಾಮಕೃಷ್ಣ ಹೆಗಡೆುಂವರ ಸರ್ಕಾರ ಇದ್ದಾಗಲಿಂದಲೂ ಇದುವರೆಗೆ ಹಲವು ಬಾರಿ ಬಂದಿದ್ದು ಪರಿಸರ ಪ್ರೇಮಿಗಳು ಪರಿಸರ ತಜ್ಞರ ಮತ್ತು ನಾಗರೀಕರ ತೀವ್ರ ವಿರೋಧದ ಕಾರಣದಿಂದ ಚಾಮುಂಡಿ ಬೆಟ್ಟಕ್ಕೆ ಹೋಗಲು ರೋಪ್ ವೇ ಅವಶ್ಯಕತೆ ಇರುವುದಿಲ್ಲ ಎಂದರು.

ಚಾಮುಂಡಿ ಬೆಟ್ಟವನ್ನು ಗಿಜಿಗುಡುವ ಪ್ರವಾಸಿ ತಾಣ ಅಥವಾ ವ್ಯಾಪಾರಿ ಕೇಂದ್ರ ಮಾಡದೆ, ಕೇವಲ ಧಾರ್ಮಿಕ ಕೇಂದ್ರವಾಗಿ ಉಳಿಸಬೇಕು ಎಂದು ಸಮಿತಿ ಮನವಿ ಮಾಡಿದೆ.

ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್‌ರವರು, ಸಂಸದ ಶ್ರೀನಿವಾಸಪ್ರಸಾದ್, ಶಾಸಕ ಜಿ.ಟಿ. ದೇವೇಗೌಡ, ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಸಾಹಿತಿ ದೇವನೂರ ಮಹಾದೇವ, ಪ್ರಧಾನ ಗುರುದತ್ತ ಹಾಗೂ ಪಂಡಿತ್ ರಾಜೀವ ತಾರಾನಾಥ ಸೇರಿದಂತೆ ಹಲವು ಗಣ್ಯರು, ಸಾಹಿತಿಗಳು ಮತ್ತು ಕಲಾವಿದರು ಬೆಟ್ಟಕ್ಕೆ ರೋಪ್ ವೇ ಬೇಡ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಬದಲಿಗೆ ಗಿಡಗಳನ್ನು ಬೆಳೆಸುವುದು. ಮಳೆ ನೀರು ಕೊಯ್ಲು ಮಾಡುವುದು, ಚರಂಡಿ ನೀರಿನ ಸರಿಯಾದ ನಿರ್ವಹಣೆ ಹಾಗೂ ಜಲಮೂಲಗಳ ಸಂರಕ್ಷಣೆ ಮುಂತಾದ ಪರಿಸರ ಸ್ನೇಹಿ ಸುಸ್ಥಿರ ಅಭಿವೃದ್ಧಿ ಮಾಡಲು ಜನ ಪ್ರತಿನಿಧಿಗಳು ಮತ್ತು ಸರ್ಕಾರ ಮುಂದಾಗಬೇಕು ಎಂದು ಹೇಳಿದರು.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

4 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

4 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

6 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

8 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

11 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

11 hours ago