ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು.ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪರೇಡ್ ನಡೆಸಿದ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ., ನೂತನ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರ ಹಾಗೂ ನೂತನ ಡಿಜಿ & ಐಜಿಪಿ ಅಲೋಕ್ ಮೋಹನ್ ರವರ ಆದೇಶ ದಂತೆ ಇಂದು ದೇವರಾಜ ಉಪವಿಭಾಗದ ವತಿಯಿಂದ ರೌಡಿ ಪೆರೇಡ್ ನಡೆಸಲಾಗಿದೆ. ಎಸಿಪಿ ಶಾಂತಮಲ್ಲಪ್ಪ ರವರು ಮಾತನಾಡಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಹಾಗೊಂದು ವೇಳೆ ಭಾಗಿಯಾದಲ್ಲಿ ಗೂಂಡಾ ಕಾಯ್ದೆಯಂತಹ ಕಾನೂನು ಬಳಸಿ ಹತ್ತಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲರೂ ಸನ್ನಡತೆ ಯಿಂದ ಇರುವಂತೆ ಸೂಚಿಸಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟ್ ರ್ ಗಳಾದ ಪಿ.ಪಿ ಸಂತೋಷ್, ಜೀವನ್, ಪಿ.ಕೆ. ರಾಜು, ಟಿ.ಬಿ ಶಿವಕುಮಾರ್ ಹಾಗೂ ವಿಭಾಗದ ಎಲ್ಲ ಪಿ ಎಸ್ ಐ ಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…