bglre mysore
ಮೈಸೂರು : ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ರಾಜಧಾನಿಗೆ ಪ್ರಮುಖ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್ ವೇ ನಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಬಿಜೆಪಿ ಸರ್ಕಾರ 712 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಈ ಅನುದಾನದಿಂದ ಹಲವಾರು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದಿದ್ದಾರೆ.
ದಶಪಥದಲ್ಲಿ ಹೊಸದಾಗಿ ಎಂಟ್ರಿ-ಎಕ್ಸಿಟ್, ರೈಲ್ವೆ ಸೇತುವೆ, ಅಂಡರ್‌ಪಾಸ್, ಓವರ್‌ಪಾಸ್, ಸರ್ವೀಸ್ ರಸ್ತೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವ ಅನೇಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ದಶಪಥ ಕೊನೆಗೊಳ್ಳುವ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸಲು ಫ್ಲೈ ಓವರ್ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ದೂರು ಸಲ್ಲಿಸಿದ್ದರು. ಅದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯದುವೀರ್ ಮಾಹಿತಿ ನೀಡಿದ್ದಾರೆ.
ಈ ದಶಪಥವು ಜನರಿಗೆ ಇನ್ನಷ್ಟು ಉಪಯುಕ್ತವಾಗಬೇಕು ಎಂಬುದನ್ನು ಮನಗಂಡು ಕೇಂದ್ರ ಸರ್ಕಾರ ಸುಧಾರಣೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಂಸದರು ವಿವರಿಸಿದ್ದಾರೆ.
ಎಕ್ಸ್‌ಪ್ರೆಸ್ ವೇನಲ್ಲಿ ಯೋಜನೆಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸಮಸ್ತ ಜನರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಬಿಜೆಪಿ ಸರ್ಕಾರ ಜನಪರ ಕಾಳಜಿ ಯೋಜನೆಗಳನ್ನ ಜಾರಿಗೆ ತರಲಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…