ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಎಲ್ಲಾ ಷಡ್ಯಂತ್ರಗಳನ್ನು ಎದುರಿಸುವ ಶಕ್ತಿ ಬಿಜೆಪಿಗಿದೆ. ಕಳೆದ ೭೦ ವರ್ಷಗಳ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮೂರು ಬಾರಿ ಬ್ಯಾನ್ ಮಾಡಿತ್ತು. ಬಳಿಕ ಅದೇ ಕಾಂಗ್ರೆಸ್ ಮೂರು ಬಾರಿಯೂ ಆರ್‌ಎಸ್‌ಎಸ್ ನಿಷೇಧ ಆದೇಶವನ್ನು ವಾಪಸ್ ಪಡೆದಿತ್ತು. ಸಚಿವ ಪ್ರಿಯಾಂಕ್ ಖರ್ಗೆ ಅವರ ದ್ವೇಷದ ಮನಸ್ಥಿತಿಯನ್ನು ಬಿಜೆಪಿ ಖಂಡಿಸುತ್ತದೆ. ಆರ್‌ಎಸ್‌ಎಸ್ ನಿಷೇಧ ಮಾಡುವ ಕಾಂಗ್ರೆಸ್ ಷಡ್ಯಂತ್ರಕ್ಕೆ ಬಿಜೆಪಿ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು.





