ಮೈಸೂರು: ಹುಲಿ ಪ್ರತ್ಯಕ್ಷ ಎಂದು ಬೇರೆ ಬೇರೆ ವಿಡಿಯೋಗಳು ವೈರಲ್ ಆಗುತ್ತಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹುನಗನಹಳ್ಳಿ ಗ್ರಾಮದ ಬಳಿ ಮುಸ್ಸಂಜೆ ವೇಳೆಯಲ್ಲಿ ಗ್ರಾಮದ ಸಮೀಪದ ಬಂಡೆಯ ಮೇಲೆ ಹುಲಿ ಕಾಣಿಸಿಕೊಂಡಿದೆ ಎಂಬ ವಿಡಿಯೋ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಭಾಗದ ಜನರು ಭಯಭೀತರಾಗಿದ್ದಲ್ಲದೇ ಆ ಜಾಗಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದರು.
ಇದನ್ನೂ ಓದಿ:-ರಾಜ್ಯದಿಂದ ಯಾವುದೇ ಕಂಪನಿ ಹೊರಗಡೆ ಹೋಗಿಲ್ಲ: ಸಚಿವ ಎಂ.ಬಿ.ಪಾಟೀಲ್
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇದೊಂದು ಹಳೆಯ ವಿಡಿಯೋ. ಹುನಗನಹಳ್ಳಿಯಲ್ಲಿ ಹುಲಿ ಕಾಣಿಸಿಕೊಂಡಿಲ್ಲ. ಜನರು ಭಯಪಡುವುದು ಬೇಡ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಒಂದು ವೇಳೆ ಹುಲಿ ಕಾಣಿಸಿಕೊಂಡಿದ್ದೇ ಆದಲ್ಲಿ ನಮಗೆ ವಿಷಯ ತಿಳಿಸಿ. ನಾವು ಹುಲಿ ಸೆರೆ ಹಿಡಿಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಮನವಿ ಮಾಡಿದೆ.





