ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಮುಖ ಪ್ರಶಸ್ತಿಗಳಲ್ಲೊಂದಾದ ‘ಕನ್ನಡ ಚಳವಳಿ ವೀರ ಸೇನಾನಿ ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ.ಸುದರ್ಶನ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯಾದ್ಯಂತ ಕನ್ನಡ ಚಳುವಳಿಗೆ ಶಕ್ತಿ, ಹೋರಾಟದ ಸ್ಪೂರ್ತಿಯನ್ನು ತುಂಬಿದಂತಹ ಮ.ರಾಮಮೂರ್ತಿಯವರ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿಯನ್ನು ಸ್ಥಾಪಿಸಿದ್ದು ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆ ಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕೆಂದು ಆಶಿಸಿದ್ದಾರೆ.
2025ನೆಯ ಸಾಲಿಗೆ ಈ ಪುರಸ್ಕಾರಕ್ಕೆ ಪಾತ್ರರಾಗಿರುವ ಮೈಸೂರಿನ ಸ.ರ.ಸುದರ್ಶನ ಗೋಕಾಕ್ ಚಳುವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿ ಕೊಂಡವರು, ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ಹೀಗೆ ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಆಡಳಿತ ಪದಕೋಶ ಸೇರಿ ಕನ್ನಡಪರ ಕೃತಿಗಳನ್ನು ಲೇಖನಗಳನ್ನು ರಚಿಸಿ ನಾಡು ಮತ್ತು ನುಡಿಯ ಪರವಾಗಿ ಸದಾ ಮಿಡಿಯುತ್ತಾ ಬಂದಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ಸೇರಿದ್ದ ಆಯ್ಕೆ ಸಮಿತಿಯು ಪಾರದರ್ಶಕವಾಗಿ ಮತ್ತು ಕೂಲಂಕಶವಾಗಿ ಪರಿಶೀಲಿಸಿ ಸರ ಸುದರ್ಶನ ಅವರನ್ನು ಈ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ. ಆಯ್ಕೆ ಸಮಿತಿಯಲ್ಲಿ ಗೌರವ ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು , ಗೌರವ ಕೋಶಾಧ್ಯಕ್ಷರಾದ ಬಿ.ಎಂ.ಪಟೇಲ್ ಪಾಂಡು ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಭಾಗವಹಿಸಿದ್ದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…