ಮೈಸೂರು

ಸಫಾರಿ ಷರತ್ತು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ; ಸಚಿವ ಖಂಡ್ರೆ ಸೂಚನೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿಂದು ಮೈಸೂರು, ಕೊಡಗು ಮತ್ತು ಚಾಮರಾಜನಗರ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಹುತೇಕ ನಾಳೆ (ಶನಿವಾರ)ಯಿಂದ ಸಫಾರಿ ಆರಂಭಿಸಲು ಅಧಿಕೃತ ಆದೇಶ ಹೊ

ರಡಿಸಲಾಗುವುದು. ಈ ಆದೇಶದಲ್ಲಿರುವ ಷರತ್ತುಗಳ ಉಲ್ಲಂಘನೆ ಆದರೆ, ಸಂಬಂಧಿತ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು.

ನ.7ಕ್ಕೆ ಮೊದಲು ಬಳಕೆಯಾಗುತ್ತಿದ್ದ ಸಫಾರಿ ವಾಹನಗಳ ಶೇ.50ರಷ್ಟು ವಾಹನ ಮತ್ತು ಸಿಬ್ಬಂದಿಯನ್ನು ಮಾತ್ರವೇ ಬಳಕೆ ಮಾಡಬೇಕು. ಹೆಚ್ಚಾಗಿ ಬಸ್ ಗಳ ಮೂಲಕ ಸಫಾರಿ ನಡೆಸಬೇಕು. ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಕ್ಯಾಂಪರ್ ಮತ್ತು ಜೀಪ್ ಬಳಕೆ ಮಾಡಬೇಕು ಈ ಬಗ್ಗೆ ಸ್ಪಷ್ಟ ಆದೇಶ ಹೊರಡಿಸಲಾಗುವುದು ಎಂದರು.

ವನ್ಯಜೀವಿಗಳು ಕಾಡಿನಿಂದ ಹೊರಬರದಂತೆ ಕ್ರಮ ವಹಿಸಿ
ಬಂಡಿಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶವನ್ನು ಗುರುತಿಸಬೇಕು. ಆ ಪ್ರದೇಶದಲ್ಲಿ ಗಸ್ತು ಹೆಚ್ಚಸಬೇಕು. ವನ್ಯಜೀವಿಗಳು ವಸತಿ ಪ್ರದೇಶಕ್ಕೆ ಬಾರದಂತೆ, ಜೀವಹಾನಿ, ಬೆಳೆ ಹಾನಿ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಬಂಡೀಪುರ ಅರಣ್ಯದ ಗಡಿಯಲ್ಲಿ 100 ಕಿ.ಲೋ. ಮೀಟರ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಇಲ್ಲಿ 5 ಕಿ.ಮೀ.ಗೆ ಒಂದರಂತೆ 25 ಶಿಬಿರ ನಿರ್ಮಿಸಿ ಪ್ರತಿ ಶಿಬಿರದಲ್ಲಿ ಸ್ಥಳೀಯರನ್ನು ಕಾಡಿನ ಮಿತ್ರ ಎಂದು ನೇಮಕ ಮಾಡಿಕೊಂಡು ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಡಬೇಕು. ಥರ್ಮಲ್ ಡ್ರೋನ್, ವಾಹನ ಇತ್ಯಾದಿ ಯಾವುದೇ ಸೌಲಭ್ಯ ಬೇಕಿದ್ದರೂ ಲಿಖಿತ ಮೂಲಕ ಪ್ರಸ್ತಾವನೆ ಸಲ್ಲಿಸಿ ಎಂದರು.

ಮಾನವ ಜೀವ ರಕ್ಷಣೆ ಆದ್ಯತೆ
ವನ್ಯಜೀವಿಗಳ ರಕ್ಷಣೆಯ ಜೊತೆಗೆ ಕಾಡಿನಂಚಿನಲ್ಲಿ ವಾಸಿಸುತ್ತಿರುವ ನಿವಾಸಿಗಳ ಜೀವ ರಕ್ಷಣೆಯೂ ಅರಣ್ಯ ಇಲಾಖೆಯ ಪ್ರಥಮ ಆದ್ಯತೆ ಆಗಿದೆ. ಇದರ ಜೊತೆಗೆ ಬೆಳೆ ರಕ್ಷಣೆಗೂ ಒತ್ತು ನೀಡಬೇಕು ಎಂದರು.

ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟು ಹಣವನ್ನು ಅರಣ್ಯದಂಚಿನ ವಸತಿ ಪ್ರದೇಶಗಳಲ್ಲಿನ ಯುವಜನರಿಗೆ ಕೌಶಲ್ಯ ತರಬೇತಿ ನೀಡಲು, ಜಾನುವಾರುಗಳಿಗೆ ಮೇವು ಒದಗಿಸಲು, ಮಕ್ಕಳಿಗೆ ಶಿಕ್ಷಣ ಕೊಡಿಸಲು ವಿನಿಯೋಗಿಸಬೇಕು ಎಂದು ತಿಳಿಸಿದರು.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ ಆಗಬೇಕಾದರೆ ಸ್ಥಳೀಯರ ನೆರವು, ಸಹಕಾರ, ಸಹಯೋಗ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅರಣ್ಯ ಸಿಬ್ಬಂದಿ ಸ್ಥಳೀಯರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅರಣ್ಯ ಸಂರಕ್ಷಣೆ ಮಾಡಬೇಕು ಎಂದರು.

ಇ-ಗಸ್ತು ಅಳವಡಿಕೆಗೆ ಸೂಚನೆ:
ಇಲಾಖೆಯ ಕಾಯಂ ಸಿಬ್ಬಂದಿ ಕಡ್ಡಾಯವಾಗಿ ಅರಣ್ಯ ಇಲಾಖೆ ಆಂತರಿಕವಾಗಿ ಅಭಿವೃದ್ಧಿಪಡಿಸಿರುವ ಇ-ಗಸ್ತು ತಂತ್ರಾಂಶವನ್ನು ಬಳಕೆ ಮಾಡಬೇಕು. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊರಗುತ್ತಿಗೆಯ ಸಿಬ್ಬಂದಿ ಇ-ಸ್ಟ್ರೈಪ್ ಬಳಕೆ ಮಾಡಲಿ ಎಂದು ತಿಳಿಸಿದರು.

ಸಮಗ್ರ ಕಮಾಂಡ್ ಕೇಂದ್ರದಲ್ಲಿ ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಡಬೇಕು. ಕೂಡಲೇ ಸಂಬಂಧಿತ ವಲಯದ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಬೇಕು. 1926 ದೂರವಾಣಿ ಸಂಖ್ಯೆಗೆ ಬರುವ ದೂರು ಮತ್ತು ಮಾಹಿತಿಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು.

ಕಾಡ್ಗಿಚ್ಚು ನಿಯಂತ್ರಿಸಿ
ನಾಗರಹೊಳೆ, ಬಂಡೀಪುರ, ಬಿ.ಆರ್.ಟಿಯಲ್ಲಿ ಈ ಬೇಸಿಗೆಯಲ್ಲಿ ಕಾಡ್ಗಿಚ್ಚು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಬೇಸಿಗೆಯಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ಯಾವುದೇ ವನ್ಯಜೀವಿ ಆಹಾರ ಮತ್ತು ನೀರಿನ ಕೊರತೆಯಿಂದ ಕಾಡಿನಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

13 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

16 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

17 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

18 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

23 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

23 hours ago