ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್‌ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು.
ಇದನ್ನು ಓದಿ:ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು
ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15 ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.
ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…