ಮೈಸೂರು

ಬಂಡೀಪುರ, ನಾಗರಹೊಳೆಯಲ್ಲಿ ಡಿಸೆಂಬರ್‌ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಕ್ಕೆ ಚಿಂತನೆ

ಮೈಸೂರು : ಕಳೆದ 15 ದಿನದಿಂದ ನಾಗರಹೊಳೆ ಹಾಗೂ ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲಾಗಿದ್ದು, ಇದರಿಂದ ಅರಣ್ಯಧಾಮಗಳಿಗೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ. ಈ ಹಿನ್ನೆಲೆ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಸದಾ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪ್ರವಾಸಿಗರ ಹಾಟ್‌ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಅರಣ್ಯ ಪ್ರವಾಸಿಗರಿಲ್ಲದೇ ಭಣಗುಡುತ್ತಿದೆ. ನಿತ್ಯ ನೂರಾರು ಜನರು ಬಂಡೀಪುರದ ಸಫಾರಿಗೆ ಆಗಮಿಸುತ್ತಿದ್ದರು. ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಖಡಕ್ ಸೂಚನೆ ಕೊಟ್ಟಿದ್ದರು.

ಇದನ್ನು ಓದಿ:ಮೈಸೂರು | ಕಾರು ಡಿಕ್ಕಿ ; ಪಾದಚಾರಿ ಸಾವು

ಸಚಿವರ ಆದೇಶದ ಅನುಸಾರ ಬಂಡೀಪುರದ ಸಫಾರಿ ಸ್ಥಗಿತಗೊಂಡು 15 ಕ್ಕೂ ಹೆಚ್ಚು ದಿನಗಳಾಯ್ತು. ಪ್ರತಿನಿತ್ಯ ಮೂರು ಲಕ್ಷ ರೂ. ಹಾಗೂ ವಾರಾಂತ್ಯದಲ್ಲಿ 15 ಲಕ್ಷ ರೂ. ಸಫಾರಿಯಿಂದಲೇ ಆದಾಯ ಬರುತ್ತಿತ್ತು. ಆದ್ರೆ ಸಫಾರಿ ಸ್ಥಗಿತದಿಂದ ಆರ್ಥಿಕ ಹೊಡೆತ ಬೀಳುವ ಸಾಧ್ಯತೆಯಿದೆ. ಜೊತೆಗೆ ಸಫಾರಿ ಜೀಪ್ ಹಾಗೂ ಬಸ್ ಎರಡು ಕೂಡ ಧೂಳು ಹಿಡಿಯುತ್ತಿವೆ.

ಇನ್ನೂ ಸಫಾರಿ ಆರಂಭಿಸುವಂತೆ ಸಾಕಷ್ಟು ಕೇಳಿಬಂದಿದೆ. ಸದ್ಯ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದೇವೆ. ಅಲ್ಲದೇ ಸಫಾರಿ ನಿಷೇಧದಿಂದ ಸಾಕಷ್ಟು ಕುಟುಂಬಗಳಿಗೆ ಆರ್ಥಿಕ ಹೊಡೆತ ಉಂಟಾಗಿದೆ. ಈ ಕುಟುಂಬಗಳು ಸಫಾರಿ ಆರಂಭಿಸುವಂತೆ ಮನವಿ ಮಾಡ್ತಿದ್ದಾರೆ. ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ಡಿಸಿಎಫ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

11 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

12 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago