ಮೈಸೂರು

ಸಾರ್ವಜನಿಕ ಗಣೇಶೋತ್ಸವ : ಸೆಸ್ಕ್‌ನಿಂದ ಸುರಕ್ಷತಾ ಮಾರ್ಗಸೂಚಿ

ಮೈಸೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ವತಿಯಿಂದ ಸಾರ್ವಜನಿಕ ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘ-ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದೆ.

ಹಬ್ಬದ ಆಚರಣೆ ವೇಳೆ ಸಂಭ್ರಮದ ಜತೆಗೆ ಸುರಕ್ಷತೆಗೂ ಆದ್ಯತೆ ನೀಡಬೇಕಿದೆ. ಆದ್ದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ನಡೆಸುವವರು ಸೂಕ್ತ ಮುನ್ನೆಚ್ಚರಿಕೆವಹಿಸಬೇಕಿದೆ. ಆ ಮೂಲಕ ಹಬ್ಬದ ಆಚರಣೆ ಸಂದರ್ಭದಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ನಿಗಾವಹಿಸಬೇಕಿದೆ.

ಆದ್ದರಿಂದ ಗಣೇಶೋತ್ಸವ ಆಚರಣೆಗೆ ಅನಧಿಕೃತವಾಗಿ ವಿದ್ಯುತ್ ಲೈನ್‌ಗಳಿಗೆ ಹುಕ್ ಹಾಕಿ ಸಂಪರ್ಕ ಪಡೆಯದೆ, ಸೆಸ್ಕ್‌ ಉಪ ವಿಭಾಗೀಯ ಅಥವಾ ಶಾಖಾ ಕಚೇರಿಗೆ ತೆರಳಿ ಅನುಮತಿ ಪಡೆದು ಸಂಪರ್ಕ ಪಡೆಯಬೇಕು. ಗಣಪತಿ ಪ್ರತಿಷ್ಠಾಪಿಸುವ ಸ್ಥಳದ ಸುತ್ತಮುತ್ತ ಯಾವುದೇ ವಿದ್ಯುತ್ ಮಾರ್ಗಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿದ್ಯುತ್ ಲೈನ್‌ ಕೆಳಗೆ ಅಥವಾ ಅಕ್ಕಪಕ್ಕದಲ್ಲಿ ಗಣಪತಿ ಪೆಂಡಾಲ್/ಮಂಟಪಗಳನ್ನು ಹಾಕದೆ, ಸುರಕ್ಷತೆಯ ಅಂತರ ಕಾಯ್ದುಕೊಂಡು ಪೆಂಡಾಲ್/ಮಂಟಪಗಳನ್ನು ಹಾಕಬೇಕು.

ಮಳೆಗಾಲ ಇರುವುದರಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದ್ದು, ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕ(ಟಿ.ಸಿ)ಗಳಿಗೆ ಬ್ಯಾನರ್, ಫಲಕಗಳನ್ನು ಕಟ್ಟಬಾರದು. ಗಣೇಶನ ವಿಗ್ರಹ ವಿಸರ್ಜನೆ ವೇಳೆ ವಿದ್ಯುತ್ ತಂತಿಗಳಿಗೆ ತಾಗುವ ರೀತಿಯಲ್ಲಿ ಎತ್ತರದ ಧ್ವಜಗಳು, ಕಟೌಟ್‌ಗಳನ್ನು ಕಟ್ಟಬಾರದು. ಗಣಪತಿ ವಿಸರ್ಜನಾ ಮೆರವಣೆಗೆ ನಡೆಯುವ ಬೀದಿಗಳಲ್ಲಿ ವಿದ್ಯುತ್ ಲೈನ್‌ಗಳ ಅಡಚಣೆ ಇದ್ದಲ್ಲಿ ಸಂಬಂಧಪಟ್ಟ ಸೆಸ್ಕ್‌ ಕಚೇರಿಯ ಗಮನಕ್ಕೆ ತಂದು, ವಿದ್ಯುತ್ ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕ್ರಮವಹಿಸಬೇಕಿದೆ. ವಿದ್ಯುತ್‌ ಸಂಬಂಧಿಸಿದ ಯಾವುದೇ ಸಹಾಯ ಅಥವಾ ಮಾಹಿತಿಗೆ 1912 ಸಂಪರ್ಕಿಸಬೇಕಿದೆ.

ಗ್ರಾಹಕರು ಹಾಗೂ ಸಾರ್ವಜನಿಕರ ಸೇವೆಗೆ ಸೆಸ್ಕ್‌ ಸದಾ ಸನ್ನದ್ಧವಿರಲಿದೆ. ಈ ನಿಟ್ಟಿನಲ್ಲಿ ಸುರಕ್ಷಿತವಾಗಿ ಗಣೇಶೋತ್ಸವ ಆಚರಿಸಲು ಗಣೇಶ ಮಂಡಳಿಗಳು ಸೆಸ್ಕ್‌ ವತಿಯಿಂದ ಅಗತ್ಯ ಸಹಕಾರ ಪಡೆದು ಸುರಕ್ಷಿತ ರೀತಿಯಲ್ಲಿ ಹಬ್ಬದ ಆಚರಣೆ ಮಾಡಬೇಕಿದೆ ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago