ಮೈಸೂರು

ಮೈಸೂರು | 10 ಸಾವಿರ ವನರಕ್ಷಕರಿಗೆ ಕೆ.ಎಸ್.ಡಿ.ಎಲ್‌ ಸುರಕ್ಷಾ ಕಿಟ್ ವಿತರಣೆ

ಬುಧವಾರ ಮೈಸೂರಿನಲ್ಲಿ ಮೊದಲ ಕಾರ್ಯಕ್ರಮ: ಸಚಿವ ಎಂ.ಬಿ ಪಾಟೀಲ್‌, ಈಶ್ವರ ಖಂಡ್ರೆ, ಸಿ.ಎಸ್.ನಾಡಗೌಡ ಭಾಗಿ

ಮೈಸೂರು : ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 1.30ಕ್ಕೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು,ಕೆಎಸ್ ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರುಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ.ಕೆಎಸ್ ಡಿಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

ಬುಧವಾರದ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ ಈ‌ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ.

ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ ಎಂದು ಅವರು ನುಡಿದಿದ್ದಾರೆ.

ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್ (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

1 hour ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

2 hours ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

17 hours ago