ಮೈಸೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಮುಖಂಡಗಳೊಂದಿಗೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಡೆಸಲಾಯಿತು.
ನಗರದ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಮುಂಜಾಗ್ರತವಾಗಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಸೀಮಾ ಲಾಟ್ಕರ್ ಅವರು ಜೂನ್ 7 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಸಂಬಂಧ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಎಲ್ಲ ಮುಖಂಡರು ಮಧ್ಯಸ್ಥಿಕೆ ವಹಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಸಂಘರ್ಷಗಳಿಗೆ ಆಸ್ಪದ ನೀಡದೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರು ಶೇಖ್ ತನ್ವೀರ್‌ಅಸೀಫ್, ಡಿಸಿಪಿ ಎಂ.ಮುತ್ತುರಾಜು, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್. ಸುಂದರ್ ರಾಜ್ , ಸಿಎಆರ್ ಸಿದ್ದನಗೌಡ ವೈ.ಪಾಟೀಲ ಉಪಸ್ಥಿತರಿದ್ದರು.





