ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ.
ಖಲಿಂ ರೆಹಮಾನ್ ಹಾಗೂ ಶೇಖ್ ಅಬ್ದುಲ್ ಖಾದರ್ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಮತ್ತೋರ್ವ ಷೇಕ್ ಮುನೀರ್ ಅಹಮದ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆಯಲಾಗಿದ್ದ ಹಳ್ಳ ಮುಚ್ಚಿರಲಿಲ್ಲ. ಈ ಹಿನ್ನೆಲೆಯಲ್ಲಿ ಅದೇ ಸ್ಥಳದಲ್ಲಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಸಾಲಿಗ್ರಾಮ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





