ಮೈಸೂರು

ಸಾಲಿಗ್ರಾಮ: ಭೀಕರ ಅಪಘಾತದಲ್ಲಿ ಇಬ್ಬರು ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ.

ಖಲಿಂ ರೆಹಮಾನ್ ಹಾಗೂ ಶೇಖ್ ಅಬ್ದುಲ್ ಖಾದರ್ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಮತ್ತೋರ್ವ ಷೇಕ್ ಮುನೀರ್ ಅಹಮದ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆಯಲಾಗಿದ್ದ ಹಳ್ಳ ಮುಚ್ಚಿರಲಿಲ್ಲ. ಈ ಹಿನ್ನೆಲೆಯಲ್ಲಿ ಅದೇ ಸ್ಥಳದಲ್ಲಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಸಾಲಿಗ್ರಾಮ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

1 hour ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

2 hours ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

3 hours ago