ಮೈಸೂರು: ಮೈಸೂರು ಅರಣ್ಯ ಭವನದ ಶ್ರೀಗಂಧದ ಕೋಟೆಯಲ್ಲಿರುವ ಶ್ರೀಗಂಧ ವಸ್ತುಸಂಗ್ರಹಾಲಯವನ್ನು ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮತಿ ನೀಡಿದ್ದಾರೆ.
ಕೂರ್ಗಳ್ಳಿಯ ‘ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ’ದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ವಸ್ತುಸಂಗ್ರಹಾಲಯವನ್ನು ಚಾಮರಾಜೇಂದ್ರ ಮೃಗಾಲಯಕ್ಕೆ ಸ್ಥಳಾಂತರಿಸಿದರೆ, ಪ್ರವಾಸಿಗರಿಗೆ ಶ್ರೀಗಂಧದ ಹಿರಿಮೆಯನ್ನು ತಿಳಿಯಲು ಅನುಕೂಲವಾಗುತ್ತದೆ. ಇದರಿಂದ ಮೈಸೂರಿನ ಖ್ಯಾತಿಯೂ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿಸಿರು ವನ್ಯಜೀವಿಗಳ ಶಸ್ತ್ರ ಚಿಕಿತ್ಸಾ ಕೊಠಡಿ ಮತ್ತು ಆಸ್ಪತ್ರೆಯನ್ನು ಉದ್ಘಾಟಿಸಿದ ಸಚಿವರು, ಅಲ್ಲಿರುವ ವೈದ್ಯಕೀಯ ಸಲಕರಣೆ ಮತ್ತು ಸೌಲಭ್ಯಗಳನ್ನು ವೀಕ್ಷಿಸಿದರು.
ಆವರಣದಲ್ಲಿ ಆನೆಗಳಿಗಾಗಿಯೇ ನಿರ್ಮಿಸಲಾಗಿರುವ ಈಜುಕೊಳದಲ್ಲಿ ಸ್ವಚ್ಛಂದವಾಗಿ ಈಜಾಡುತ್ತಿದ್ದ ಆನೆಗಳನ್ನು ಹಾಗೂ ಗಾಯಗೊಂಡ ಮತ್ತು ಅತಿ ಉಗ್ರ ಸ್ವಭಾವದ ಹುಲಿ, ಚಿರತೆಗಳನ್ನು ಇಡಲಾಗಿರುವ ಆವರಣಕ್ಕೂ ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…