Mysore
26
clear sky

Social Media

ಮಂಗಳವಾರ, 20 ಜನವರಿ 2026
Light
Dark

ಸಂದೇಶ್ ನಾಗರಾಜ್ ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಸಾಧಿಸುತ್ತಾರೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ‌ ಪರಿಷತ್ ಸದಸ್ಯರಾದ ಚಿತ್ರ‌ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು.

ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೆ ಸ್ನೇಹಕ್ಕೆ ಯಾವತ್ತೂ ಧಕ್ಕೆ ಆಗಿಲ್ಲ ಎಂದರು.

Tags:
error: Content is protected !!