ಮೈಸೂರು

ಬಡ ವ್ಯಾಪಾರಿಗಳ ಸಂಜೀವಿನಿ ಮಂಡಿ ಮಾರುಕಟ್ಟೆ

120 ವರ್ಷಗಳನ್ನು ಪೂರೈಸಿರುವ ಕಟ್ಟಡ ಕೊನೆಯ ದಿನಗಳನ್ನು ಎಣಿಸುತ್ತಿದೆ

ಕೆ.ಬಿ.ರಮೇಶ ನಾಯಕ

ಮೈಸೂರು: ಮೈಸೂರು ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಮಂಡಿ ಮಾರುಕಟ್ಟೆ ಕೂಡ ನಿರ್ವಹಣೆ ಕೊರತೆಯಿಂದ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ.

ಚಾಮರಾಜ ಒಡೆಯರ್ ಕಾಲದಲ್ಲಿ ನಿರ್ಮಾಣವಾಗಿರುವ ಈ ಮಾರುಕಟ್ಟೆ ಕಟ್ಟಡಕ್ಕೆ ಬರೋಬ್ಬರಿ ೧೨೦ ವರ್ಷಗಳಾಗಿದ್ದು, ಹಲವು ಕಡೆಗಳಲ್ಲಿ ಶಿಥಿಲವಾಗಿರುವ ಕಾರಣ ವರ್ತಕರು ಜೀವ ಕೈಯಲ್ಲಿ ಹಿಡಿದುಕೊಂಡು ವ್ಯಾಪಾರ ಮಾಡಬೇಕಿದೆ.

ಬೆಂಕಿ ನವಾಬ ಬೀದಿ, ಅಕ್ಬರ್ ರಸ್ತೆಗೆ ಹೊಂದಿಕೊಂಡಂತೆ ಮಂಡಿ ಮೊಹಲ್ಲಾದಲ್ಲಿ ನಿರ್ಮಾಣ ಮಾಡಲಾಗಿರುವ ಮಾರುಕಟ್ಟೆ ಕಟ್ಟಡ ಚೌಕಾಕಾರದ ಪೆಟ್ಟಿಗೆಯಂತಿದ್ದು, ಅಕ್ಬರ್ ರಸ್ತೆಗೆ ಮುಖ ಮಾಡಿದಂತೆ ೧೩ ಮಳಿಗೆಗಳು, ಬೆಂಕಿ ನವಾಬ ಬೀದಿ ಕಡೆಗೆ ೨೦, ಮಾರುಕಟ್ಟೆ ಒಳಗೆ ೯೬ ಮಳಿಗೆಗಳಿವೆ. ಇದರಲ್ಲಿ ಮೇಕೆ-ಕುರಿ ಮಾಂಸ ಮಾರಾಟಕ್ಕೆ ಹದಿನಾಲ್ಕು ಮಳಿಗೆಗಳು ಇವೆ.ಈ ಕಟ್ಟಡದ ಗೋಡೆಗಳನ್ನು ಸೈಜುಗಲ್ಲು, ಸುಟ್ಟ ಇಟ್ಟಿಗೆಗಳು, ಕಲ್ಲುಗಳು, ಸುಣ್ಣದ ಗಾರೆ ಬಳಸಿ ನಿರ್ಮಿಸಲಾಗಿದೆ. ಮೇಲ್ಚಾವಣಿಗೆ ಮದ್ರಾಸ್ ಆರ್‌ಸಿಸಿ ಹಾಕಲಾಗಿದೆ. ಮಾರುಕಟ್ಟೆಯ ಮುಂಭಾಗ ಹಾಕಿದ್ದ ಸುಣ್ಣದ ಗಾರೆ ಕಳಚಿ ಬೀಳುತ್ತಿದೆ. ಪ್ರವೇಶ ದ್ವಾರದ ಇಕ್ಕೆಲಗಳೂ ಶಿಥಿಲವಾಗಿವೆ. ಮತ್ತೊಂದು ಪ್ರವೇಶದಲ್ಲಿ ಇಟ್ಟಿಗೆ ಚೂರುಗಳು ಉದುರುತ್ತಿದ್ದು, ಮಳೆ ನೀರು ಸೋರಿಕೆಯಾಗಿ ಪಾಚಿ ಕಟ್ಟಿರುವುದರಿಂದ ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ.ಕಟ್ಟಡದ ಮತ್ತೊಂದು ದಿಕ್ಕಿನಲ್ಲಿ ಹೆಂಚುಗಳು ಹಾಳಾಗಿದ್ದರಿಂದ ನೀರು ನಿಂತು ಗೋಡೆಗಳಲ್ಲಿ ತೇವಾಂಶ ಏರಿದೆ. ಇದರಿಂದಾಗಿ ಅನೇಕರು ಅಂಗಡಿಗಳನ್ನು ಮುಚ್ಚಿ ಬೇರೆ ಬೇರೆ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಪಟ್ವೇಗಾರ್ ಬೀದಿಯ ಬದಿಗೆ ಇರುವ ಮಳಿಗೆಗಳ ಗೋಡೆಯ ಹಿಂಭಾಗ ತುಂಬಾ ಹಾಳಾಗಿ ಹೋಗಿದ್ದು ದುರಸ್ತಿಯಿಂದ  ಹಾಗೆಯೇ ಬಿಟ್ಟಿದ್ದರಿಂದ ಗಿಡ-ಗಂಟಿಗಳು ಬೆಳೆದಿವೆ. ಮಾರುಕಟ್ಟೆ ಒಳಗಿನ ೮ ಅಂಗಡಿಗಳು ಬಾಗಿಲು ಮುಚ್ಚಿರುವುದರಿಂದ ಹಕ್ಕಿಪಕ್ಷಿಗಳ ತಾಣವಾಗಿದೆ. ಕಟ್ಟಡದ ದುರಸ್ತಿ ಮಾಡಿಸಿಕೊಡುವಂತೆ ನಗರಪಾಲಿಕೆಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗದೆ ಬಾಡಿಗೆದಾರರು ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಇದರಿಂದಾಗಿ ನಗರಪಾಲಿಕೆಗೆ ಬರಬೇಕಿದ್ದ ಆದಾಯವು ಕಡಿಮೆಯಾಗಿದೆ. ಈರುಳ್ಳಿ, ತರಕಾರಿ, ಹಣ್ಣು ವ್ಯಾಪಾರಿಗಳು ಪ್ಲಾಸ್ಟಿಕ್ ಹೊದಿಕೆ ಹಾಕಿಸಿಕೊಂಡು ಮಳೆಯಿಂದ ರಕ್ಷಣೆ ಮಾಡಿಕೊಂಡಿದ್ದರೆ, ಮುಖ್ಯದ್ವಾರದ ಮಳಿಗೆಗಳಲ್ಲಿ ವ್ಯಾಪಾರ ಮಾಡುವವರು ಮಳಿಗೆಗೆ ತಾವೇ ಸಣ್ಣಪುಟ್ಟ ತೇಪೆ ಹಾಕಿಸಿಕೊಂಡು ವ್ಯಾಪಾರ ನಡೆಸುತ್ತಿದ್ದಾರೆ.

೫೦ ವರ್ಷಗಳಿಂದ ಇದೇ ಜಾಗದಲ್ಲಿ ಕುಳಿತು ಬಾಳೆಹಣ್ಣು ಮಾರುತ್ತಿದ್ದೇನೆ. ೨ ಪೈಸೆ ಇದ್ದ ಬಾಡಿಗೆ ೧೦ ರೂ. ಆಗಿದೆ. ಅಂದು ೨ ಪೈಸೆ ಬಾಡಿಗೆ ಕೊಡಲು ಹೋದರೆ ಆ ಪುಣ್ಯಾತ್ಮ ಬೇಡ ಮಗುವಿಗೆ ಹಾಲು ಕುಡಿಸಲು ಇಟ್ಟುಕೋ ಎನ್ನುತ್ತಿದ್ದ. ಈಗ ನಾನು ಕುಳಿತಿರುವ ಕಡೆ ಮಳೆ ಬಂದರೆ ಸೋರುತ್ತಿದೆ. ಕಟ್ಟಡ ದುರಸ್ತಿ ಮಾಡಿಸಿದರೆ ಅಮಾಯಕರ ಜೀವ ಉಳಿಯಲಿದೆ.

 

-ಭದ್ರಮ್ಮ, ಬಾಳೆಹಣ್ಣು ವ್ಯಾಪಾರಿ

ಮಳಿಗೆಗಳನ್ನು ದುರಸ್ತಿ ಮಾಡಿಸುತ್ತೇವೆಂದು ಹೋದವರು ಮತ್ತೆ ಈ ಕಡೆಗೆ ಬಂದಿಲ್ಲ. ಅನೇಕ ಕಡೆಗಳಲ್ಲಿ ನೀರು ಸೋರಿ ಕಟ್ಟಡ ಹಾಳಾಗಿದೆ. ನಮ್ಮಂತಹ ಸಣ್ಣಪುಟ್ಟ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ದುರಸ್ತಿ ಮಾಡಿಸಿದರೆ ಉತ್ತಮ.

 

– ಹೇಮಂತ್ ಕುಮಾರ್, ಸೊಪ್ಪಿನ ವ್ಯಾಪಾರಿ

ಈ ಕಟ್ಟಡವನ್ನು ಮಹಾರಾಜರ ಕಾಲದಲ್ಲಿ ನಿರ್ಮಿಸಿ ಉಚಿತವಾಗಿ ಕೊಡಲಾಗಿತ್ತು. ನಿರ್ವಹಣೆ ಇಲ್ಲದೆ ಕಟ್ಟಡದ ಪರಿಸ್ಥಿತಿ ಹದಗೆಟ್ಟಿದೆ. ಒಂದು ಬಾರಿ ೩೦ ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂಬ ಮಾತು ಕೇಳಿ ಬಂತು. ಆದರೆ, ದುರಸ್ತಿ ಮಾಡಲಿಲ್ಲ. ಕಟ್ಟಡ ಸಂಪೂರ್ಣ ಬಿದ್ದು ಹೋದರೆ ವ್ಯಾಪಾರಿಗಳು ಖಾಲಿ ಮಾಡುತ್ತಾರೆ ಎಂಬ ಮನಸ್ಥಿತಿ ಹೊಂದಿದ್ದಾರೆ. ಜೀವಹಾನಿಯಾಗುವ ಮುನ್ನ ಎಚ್ಚೆತ್ತು ದುರಸ್ತಿ ಮಾಡಿಸಲಿ.

 

 

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

12 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago