ಮೈಸೂರು: ಸ್ವ-ಸಹಾಯ ಸಂಘದ ಸದಸ್ಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲು ಸಂಜೀವಿನಿ ಕಾರ್ಯಕ್ರಮಗಳಾದ ಸುತ್ತು ನಿಧಿ, ಸಮುದಾಯ ಬಂಡವಾಳ ನಿಧಿ ಹಾಗೂ ಸರ್ಕಾರದ ಆರ್ಥಿಕ ನೆರವು ಕಾರ್ಯಕ್ರಮಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂಧತಿ ಚಂದ್ರಶೇಖರ್ ತಿಳಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಉದ್ಟಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 16,407 ಸ್ವ-ಸಹಾಯ ಸ್ತ್ರೀ ಶಕ್ತಿ ಸಂಘಗಳಿದ್ದು, ಸುಮಾರು 2,02,696 ಸದಸ್ಯರಿರುತ್ತಾರೆ. ಸ್ವ-ಸಹಾಯ ಸಂಘದ ಮಹಿಳೆಯರು ಈವರೆಗೆ ಸುಮಾರು 239 ಕೋಟಿ ಆರ್ಥಿಕ ಚಟುವಟಿಕೆ ಮಾಡಿರುವುದು ತುಂಬಾ ಸಂತೋಷದ ವಿಷಯ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಇರುವ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘಗಳ ಮೂಲಕ ಕರಕುಶಲ ಕಲೆ ಬಳಸಿ ದೀಪಗಳನ್ನು ತಯಾರು ಮಾಡಿ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಆಚರಿಸುವ ಬದಲು ದೀಪ ಹಚ್ಚಿ ಆಚರಿಸಬೇಕು. ಪಟಾಕಿಗಳು ಪರಸರಕ್ಕೇ ಹಾನಿಕಾರಕ ಹಾಗೂ ಶಬ್ದ ಮಾಲಿನ್ಯ ಉಂಟು ಮಾಡುತ್ತದೆ. ಇದರ ಬದಲು ದೀಪವನ್ನು ಹಚ್ಚಿ ಆಚರಿಸಬೇಕು ಎಂದು ಹೇಳಿದರು.
ದೀಪಾವಳಿ ಹಬ್ಬದ ಅಂಗವಾಗಿ ಇಂದಿನಿಂದ ಒಂದು ವಾರಗಳ ಕಾಲ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಆಯೋಜಿಸಿ ಸ್ವ-ಸಹಾಯ ಸಂಘದ ಸದಸ್ಯರ ಆರ್ಥಿಕ ಚಟುವಟಿಕೆಗೆ ಒತ್ತು ನೀಡಿ ಸಾರ್ವಜನಿಕರಿಗೆ ಅರಿವು ಉಂಟು ಮಾಡಿರುವುದು ತುಂಬಾ ಸಂತೋಷದ ಸಂಗತಿ ಎಂದು ಹೇಳಿದರು.
ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ದಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಅವರ ಸಹಯೋಗದೊಂದಿಗೆ “ದೀಪ ಸಂಜೀವಿನಿ” ಕಾರ್ಯಕ್ರಮವನ್ನು ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದು, ಸದರಿ ಮಳಿಗೆಗಳನ್ನು ಕೆ ಎಂ ಗಾಯತ್ರಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್.ಎನ್ ಗೋಪಾಲಕೃಷ್ಣ ವೀಕ್ಷಿಸಿದರು.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…