ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಿ ಮೋದಿ ಅವರು ರಾಜ್ಯದ (ಕರ್ನಾಟಕ) ಜನತೆಗೆ ಮಕರ ಸಂಕ್ರಾತಿಯ ಶುಭಾಶಯ ಕೋರಿದ್ದಾರೆ. ಕನ್ನಡದಲ್ಲಿ ಪತ್ರ ಬರೆದು ಶುಭ ಹಾರೈಸಿರುವುದು ವಿಶೇಷ. ಪತ್ರವನ್ನು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
‘ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯು ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶದಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ’ ಎಂದಿದ್ದಾರೆ.
ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ.
ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಅಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ’ ಎಂದೂ ಅವರು ಆಶಿಸಿದ್ದಾರೆ.
ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ‘ಮಾಘಿ, ಬಿಹು’ ಎಂದು ಕರೆಯಲಾಗುವ, ಸಾರ್ವತ್ರಿಕವಾಗಿ ಮಕರ ಸಂಕ್ರಾಂತಿ ಎಂದು ಕರೆಯಲಾಗುವ ಹಬ್ಬಕ್ಕೂ ಮೋದಿ ಪ್ರತ್ಯೇಕ ಪೋಸ್ಟ್‌ಗಳ ಮೂಲಕ ಶುಭ ಕೋರಿದ್ದಾರೆ.
‘ಮಕರ ಸಂಕ್ರಾಂತಿ, ಪೊಂಗಲ್, ಸುಗ್ಗಿ ಹಬ್ಬ, ಮಾಘಿ, ಭೋಗಿ, ಬಿಹು, ಖಿಚಡಿ, ಪೌಷ್ ಪರ್ವ, ಉತ್ತರಾಯಣ ಮತ್ತು ಮಕರವಿಳಕ್ಕು ಹಬ್ಬಗಳು ಪ್ರತಿಯೊಬ್ಬರ ಜೀವನದಲ್ಲಿ ಅಪರಿಮಿತ ಸಂತೋಷ ಮತ್ತು ಅನಿಯಂತ್ರಿತ ಸಮೃದ್ಧಿಯನ್ನು ತರಲಿ. ಎಲ್ಲರಿಗೂ ಹಬ್ಬದ ಶುಭಾಶಯಗಳು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ನಾಡಿದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ…
ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ…
ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ…
ಚಿತ್ರ ನಟ ಯಶ್ ಅಭಿನಯದ ಟ್ಯಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಆಕ್ಷೇಪಾರ್ಹ…
ನನೆಗುದಿಗೆ ಬಿದ್ದಿದ್ದ ನೀರು ತುಂಬಿಸುವ ಕಾರ್ಯಕ್ಕೆ ನಾಳೆ ಶಾಸಕ ಮಂಜುನಾಥ್ ಅವರಿಂದ ಚಾಲನೆ; ರೈತರಲ್ಲಿ ಸಂತಸ ಮಹಾದೇಶ್ ಎಂ ಗೌಡ…
ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ದೊರೆಯದ ಉತ್ತಮ ಬೆಲೆ ಮಂಜು ಕೋಟೆ ಎಚ್.ಡಿ.ಕೋಟೆ : ಈ ಬಾರಿ ಬೆಳೆದ ಬೆಳೆ ಅನೇಕ…