ಮೈಸೂರು

ಸಂಕ್ರಾಂತಿ ವಿಶೇಷ : ಮೈಸೂರು – ಟ್ಯುಟಿಕಾರನ್‌ ನಡುವೆ ವಿಶೇಷ ರೈಲು

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಂದಾಗಿದ್ದಾರೆ.

ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ ಪ್ರಯಾಣಿಕರಿಗಾಗಿ ವಿಶೇಷ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ನೈರುತ್ಯ ರೈಲ್ವೆ ವತಿಯಿಂದ ಮೈಸೂರು ಮತ್ತು ಟ್ಯುಟಿಕಾರನ್‌ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ವಿಶೇಷ ರೈಲುಗಳ ವಿವರ
06283 ಮೈಸೂರು– ಟ್ಯುಟಿಕಾರನ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲುಗಳು ಇದೇ 9 ಮತ್ತು 13 ರಂದು (ಶುಕ್ರವಾರ ಮತ್ತು ಮಂಗಳವಾರ) ರಂದು ಮೈಸೂರಿನಿಂದ ಸಂಜೆ 18:35 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 11:00 ಗಂಟೆಗೆ ಟ್ಯುಟಿಕಾರನ್‌ ತಲುಪಲಿದೆ ಎಂದು ಸಂಸದರು ವಿವರಿಸಿದ್ದಾರೆ.

06284 ಟ್ಯುಟಿಕಾರನ್‌ –ಮೈಸೂರು ಎಕ್ಸ್‌ಪ್ರೆಸ್‌ ವಿಶೇಷ ರೈಲು 10 ಮತ್ತು 14ರಂದು (ಶನಿವಾರ ಮತ್ತು ಬುಧವಾರ) ರಂದು ಟ್ಯುಟಿಕಾರನ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡಲಿದ್ದು, ಮರುದಿನ ಬೆಳಗ್ಗೆ 07:45 ಗಂಟೆಗೆ ಮೈಸೂರು ತಲುಪಲಿದೆ ಎಂದು ಹೇಳಿದ್ದಾರೆ.

ಎಲ್ಲೆಲ್ಲಿ ನಿಲುಗಡೆ
ಈ ರೈಲುಗಳು ಮಂಡ್ಯ, ಮದ್ದೂರು, ಚನ್ನಪಟ್ಟಣ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಹೊಸೂರು, ಧರ್ಮಪುರಿ, ಸೇಲಂ ಜಂಕ್ಷನ್, ನಾಮಕ್ಕಲ್, ಕರೂರು ಜಂಕ್ಷನ್, ದಿಂಡಿಗಲ್ ಜಂಕ್ಷನ್, ಮದುರೈ ಜಂಕ್ಷನ್, ವಿರುದ್ಧ್‌ನಗರ ಜಂಕ್ಷನ್, ಸತೂರು, ಕೋವಿಲ್‌ಪಟ್ಟಿ ಮತ್ತು ಟುಟಿಮೇಲೂರ್ ನಿಲ್ದಾಣಗಳಲ್ಲಿ ಸ್ಟಾಪ್‌ ಕೊಡಲಿದೆ. ಈ ವಿಶೇಷ ರೈಲು ಒಟ್ಟು 19 ಕೋಚ್‌ಗಳನ್ನು ಹೊಂದಿದ್ದು, ಎಸಿ ಟು ಟೈಯರ್ – 03, ಎಸಿ ತ್ರಿ ಟೈಯರ್ – 06, ಸ್ಲೀಪರ್ ಕ್ಲಾಸ್ – 08, ಎಸ್ಎಲ್ಆರ್/ಡಿ – 02 ಬೋಗಿಗಳು ಇವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

3 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

3 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

3 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

3 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

3 hours ago