ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ನಾಡಗೌಡ ಪಾಲ್ಗೊಂಡು, ನೂತನ ವಧು-ವರರಿಗೆ ಶುಭ ಕೋರಿದರು. ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಪತ್ನಿ ಅನಿತಾ ಮಹೇಶ್ ಹಾಜರಿದ್ದರು.
ಇವರೊಟ್ಟಿಗೆ ಸಂಸದ ಯದುವೀರ್ ಒಡೆಯರ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಸಿ.ಎನ್.ಮಂಜೇಗೌಡ, ಮಾಜಿ ಸಭಾಪತಿಗಳಾದ ಬೋಪಯ್ಯ, ಪುಟ್ಟಣ್ಣ, ವಿನಯ್ ಗುರೂಜಿ, ಗಾವಡಗೆರೆ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ, ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ಮೈಸೂರಿನ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಚಿತ್ರನಟರಾದ ಕಿಚ್ಚ ಸುದೀಪ್, ಡಾಲಿ ಧನಂಜಯ, ಹಲವಾರು ಗಣ್ಯರು ಭಾಗವಹಿಸಿ
ನವ ವಧುವರರಿಗೆ ಹೂಗುಚ್ಚ ನೀಡಿ ಶುಭಾಶಯ ಕೋರಿದರು.