ಮೈಸೂರು

ಸಾರಾ ಮಹೇಶ್‌ ಪುತ್ರನ ಮದುವೆ ; ಎಚ್‌ಡಿಕೆ, ಕಿಚ್ಚ ಸುದೀಪ್‌ ಭಾಗಿ

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ನಾಡಗೌಡ ಪಾಲ್ಗೊಂಡು, ನೂತನ ವಧು-ವರರಿಗೆ ಶುಭ ಕೋರಿದರು. ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಪತ್ನಿ ಅನಿತಾ ಮಹೇಶ್ ಹಾಜರಿದ್ದರು.

ಇವರೊಟ್ಟಿಗೆ  ಸಂಸದ ಯದುವೀರ್ ಒಡೆಯರ್, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಸಿ.ಎನ್.ಮಂಜೇಗೌಡ, ಮಾಜಿ ಸಭಾಪತಿಗಳಾದ ಬೋಪಯ್ಯ, ಪುಟ್ಟಣ್ಣ, ವಿನಯ್ ಗುರೂಜಿ, ಗಾವಡಗೆರೆ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ, ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ಮೈಸೂರಿನ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಚಿತ್ರನಟರಾದ ಕಿಚ್ಚ ಸುದೀಪ್, ಡಾಲಿ ಧನಂಜಯ, ಹಲವಾರು ಗಣ್ಯರು ಭಾಗವಹಿಸಿ
ನವ ವಧುವರರಿಗೆ ಹೂಗುಚ್ಚ ನೀಡಿ ಶುಭಾಶಯ ಕೋರಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

40 mins ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

1 hour ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

1 hour ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

5 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

10 hours ago