ಸರಗೂರು: ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಹುಲಿಯೊಂದು ಹಠಾತ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಮುಳ್ಳೂರು ಗ್ರಾಮದ 55 ವರ್ಷ ವಯಸ್ಸಿನ ರಾಜಶೇಖರ ಮೂರ್ತಿ ಎಂಬುವವರೇ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಯಡಿಯಾಲ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





