Mysore
17
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಸರಗೂರು| ಕಂದಲಿಕೆ ಸಮೀಪದಲ್ಲಿ ಹುಲಿ ಸೆರೆ: ಡಿಎನ್‌ಎ ಟೆಸ್ಟ್‌ಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್‌ಎ ಎರಡನ್ನೂ ಪರಿಶೀಲಿಸಿ ಸೆರೆ ಹಿಡಿಯಲಾದ ಹುಲಿ ಯಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಇನ್ನು ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸಚಿವ ಈಶ್ವರ್‌ ಖಂಡ್ರೆ ವಿವರಣೆ ನೀಡಿದ್ದಾರೆ.

Tags:
error: Content is protected !!