ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಕಂದಲಿಕೆ ಸಮೀಪದಲ್ಲಿ ಹುಲಿಯೊಂದು ಸೆರೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ತಡರಾತ್ರಿ ಈ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ ಮತ್ತು ಈ ಹುಲಿಯ ಡಿಎನ್‌ಎ ಎರಡನ್ನೂ ಪರಿಶೀಲಿಸಿ ಸೆರೆ ಹಿಡಿಯಲಾದ ಹುಲಿ ಯಡಿಯಾಲ, ಮೊಳೆಯೂರು, ನುಗು ಸುತ್ತಮುತ್ತ ಜನರ ಅಮೂಲ್ಯ ಜೀವ ಹಾನಿ ಮಾಡಿದ ಹುಲಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಉನ್ನತಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇನ್ನು ಈ ಹುಲಿಗೆ ಸುಮಾರು 12-13 ವರ್ಷ ವಯಸ್ಸಾಗಿದ್ದು, ಹಲ್ಲುಗಳು ಬಲಹೀನವಾಗಿವೆ. ಹೀಗಾಗಿ ಅರಣ್ಯದಲ್ಲಿ ಸಸ್ಯಹಾರಿ ವನ್ಯಜೀವಿಗಳ ಬೇಟೆ ಆಡಲು ಅಶಕ್ತವಾಗಿದ್ದ ಈ ಹುಲಿ, ಪಕ್ಕದ ಗ್ರಾಮಗಳಿಗೆ ನುಗ್ಗಿ ಜನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸಚಿವ ಈಶ್ವರ್ ಖಂಡ್ರೆ ವಿವರಣೆ ನೀಡಿದ್ದಾರೆ.
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…