ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ.
ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಚಲನವಲನದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ಹೆಚ್ಚಿನ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿ ಎರಡು ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಅಕ್ಕಪಕ್ಕದ ಗ್ರಾಮಸ್ಥರು ಆಗ್ರಹಿಸಿದ್ದಾರೆ.





