Mysore
26
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಗಮನ ಸೆಳೆದ ಸವ್ವೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ-2025

ಮೈಸೂರು : ಶಾಲೆ ಪರಿಸರ ಮತ್ತು ಶಿಕ್ಷಕರ ತೊಡಗುವಿಕೆ ಎರಡೂ ಪೂರಕವಾಗಿದ್ದಲ್ಲಿ ಮಾತ್ರ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಕರ್ನಾಟ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಅಧ್ಯಕ್ಷರಾದ ಎಂ.ಸಿ.ರಾಜೇಶ್ವರಿ ಹೇಳಿದರು.

ಎಚ್ ಡಿ ಕೋಟೆ ತಾಲ್ಲೂಕಿನ ಸವ್ವೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಸಮನ್ವಯಾಧಿಕಾರಿಗಳ ಕಛೇರಿ, ಕ್ಲಸ್ಟರ್ ಸಂಪನ್ಮೂಲ ಕೇಂದ್ರ ಸವ್ವೆ ಇವರ ಸಂಯುಕ್ತಾಶ್ರಯದಲ್ಲಿಒಂದನೇ ತರಗತಿಯಿಂದ ಐದನೇ ತರಗತಿಯ ಮಕ್ಕಳಿಗೆ ಶುಕ್ರವಾರ ಅಯೋಜಿಸಿದ್ದ ಕ್ಲಸ್ಟರ್ ಮಟ್ಟದ “ಕಲಿಕಾ ಹಬ್ಬ 2025ರ ಕಾಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜಾರಿಗೊಳಿಸಿರುವ ಕಲಿಕಾ ಹಬ್ಬದಿಂದಾಗಿ ಮಕ್ಕಳಿಗೆ ಸ್ಫೂರ್ತಿ ಬರಲಿದ್ದು, ಕಥೆ, ಸಾಹಿತ್ಯ, ಓದು, ಕ್ರೀಡೆ ಮತ್ತು ನಲಿಕಲಿ ಹಮ್ಮಿಕೊಂಡು ಪೂರಕ ವಾತಾವರಣ ಸೃಷ್ಠಿಸುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಿಕ್ಷಣದ ಜೊತೆಗೆ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಿರಂತರವಾಗಿ ಕಲಿಯುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಕಲಿಕಾ ಹಬ್ಬವು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸುತ್ತದೆ. ಮಕ್ಕಳು ಮತ್ತು ಶಿಕ್ಷಕರು ಕಲಿಕಾ ಹಬ್ಬದಲ್ಲಿ ಭಾಗವಹಿಸಬೇಕು. ಮಕ್ಕಳಿಗೆ ಪ್ರಶ್ನೆ ಮಾಡುವ ಹಾಗೂ ಶೈಕ್ಷಣಿಕ ಮನೋಭಾವ ವೃದ್ಧಿಯಾಗುವುದರ ಜೊತೆಗೆ ಮಕ್ಕಳಲ್ಲಿ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಕಲಿಕಾ ಹಬ್ಬ ಆಯೋಜಿಸಿರುವುದು ಸಂತೋಷದ ಸಂಗತಿ ಎಂದರು.

ಸವ್ವೆ ಕ್ಲಸ್ಟರ್ ಸಂಪನ್ಮೂಲದ ಸಂಯೋಜಕ ಕೆಂಪರಾಜು ಎಚ್.ಮಟಕೆರೆ ಮಾತನಾಡಿ ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದ್ದು ಕಲಿಕಾ ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯಕ್ರಮ ಅಯೋಜನೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕಿನ ಘಟಕದ ಪ್ರಧಾನ ಕಾಯದರ್ಶಿ ಎಮ್.ಯಶ್ವಂತ್ ಕುಮಾರ್,  ಜಯರಾಮೇಗೌಡ,ಆನಂದ್, ಮುದ್ದನಾಯಕ ಮತ್ತಿತರರು ಇದ್ದರು.

Tags:
error: Content is protected !!