ಮೈಸೂರು

ಎಸ್.ಸಿ-ಎಸ್.ಟಿ ದೌರ್ಜನ್ಯ ಪ್ರಕರಣ : ತುರ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು :  ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪಡುವಾರಳ್ಳಿಯಲ್ಲಿರುವ ಬಾಬು ಜಗಜೀವನ ರಾಮ್ ಭವನ ಸಭಾಂಗಣದಲ್ಲಿ ಶುಕ್ರವಾರ (ಮಾ. 28ರಂದು) ನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬಂಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ‌ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬಂಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂದಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್ .ಸಿ ಹಾಗೂ ಎಸ್.ಟಿ. ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿಯು ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ನಗರದಲ್ಲಿ ಅಕ್ರಮ ಮದ್ಯ ಮಾರಾಟ ಬಗ್ಗೆ ದೂರುಗಳು ಬಂದರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನು ರೀತಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಅವರು ಅನುಸೂಚಿತ ಜಾತಿ/ಅನುಸೂಚಿತ ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆ ನಿರ್ವಹಿಸಿದರು.

ಸಭೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

13 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

13 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

13 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

14 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

14 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

14 hours ago