ಮೈಸೂರು: ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆ (National Level Moot Court Competition 2023)ಯಲ್ಲಿ ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಕಾನೂನು ಕಾಲೇಜಿನ (JSS Law College Mysuru) ಮೂವರು ವಿದ್ಯಾರ್ಥಿಗಳಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ವಿಜೇತರಾಗಿದ್ದಾರೆ. ಮಾರ್ಚ್ 11ರಂದು ಬೆಂಗಳೂರಿನಲ್ಲಿ ರೇವಾ ವಿಶ್ವವಿದ್ಯಾಲಯದ (REVA University Bengaluru) ಸ್ಕೂಲ್ ಆಫ್ ಲೀಗಲ್ ಸ್ಟಡೀಸ್ ಆಯೋಜಿಸಿದ್ದ ಮೂರು ದಿನಗಳ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 27 ತಂಡಗಳು ಭಾಗವಹಿಸಿದ್ದವು. ರೋಹನ್ ವಿ ಗಂಗಡ್ಕರ್ ಮೈಸೂರಿನ ಹಿರಿಯ ವಕೀಲರು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆಯ ಗೌರವ ಸಂಪಾದಕ ಹೆಚ್. ಎನ್. ವೆಂಕಟೇಶ್ ಅವರ ಪುತ್ರನಾಗಿದ್ದಾನೆ.
ವಿಜೇತರಾದ ರೋಹನ್ ವಿ ಗಂಗಾಡ್ಕರ್, ಅಮೂಲ್ಯ ಮತ್ತು ನಿಕಿತಾ ಅವರು ಟ್ರೋಫಿ ಮತ್ತು 20,000 ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ. ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಮತ್ತು ನ್ಯಾಯಮೂರ್ತಿ ಇ ಸೀತಾರಾಮಯ್ಯ ಇಂದಿರೇಶ್ ಅವರು ಬಹುಮಾನ ವಿತರಣೆ ಮಾಡಿದರು. ಈ ಸ್ಪರ್ಧೆಯಲ್ಲಿ ಸ್ಕೂಲ್ ಆಫ್ ಎಕ್ಸಲೆನ್ಸ್ ಇನ್ ಲಾ ಚೆನ್ನೈ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…