ಮೈಸೂರು

ಸ್ವದೇಶ್ ದರ್ಶನ್ ಯೋಜನೆಯಡಿ ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಎರಡನೇ ಹಂತದ ಡಿಪಿಆರ್

ಮೈಸೂರು ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿಗಳ ಸೂಚನೆ

ಮೈಸೂರು: ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು, ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.

ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು, ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್‌ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

48 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago