ಮೈಸೂರು ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿಗಳ ಸೂಚನೆ
ಮೈಸೂರು: ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು, ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮರು ಡಿಪಿಆರ್ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧ ಸ್ವದೇಶ್ ದರ್ಶನ್ 2.0 ಯೋಜನೆ ಡಿಪಿಆರ್ 2 ಸಿದ್ಧಪಡಿಸುವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಈ ಯೋಜನೆಯಡಿ ಮೈಸೂರು ಸೇರಿದಂತೆ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ದಿಂದ 70 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸ್ವದೇಶ್ ದರ್ಶನ್ ಯೋಜನೆಯಡಿ ಮೊದಲನೇ ಹಂತದಲ್ಲಿ ಟಾಂಗ್ ರೈಡ್ ಹಾಗೂ ಎಕೋಲಜಿಕಲ್ ಎಕ್ಸ್ ಪಿರಿನ್ಸ್ ವಲಯಕ್ಕೆ ರೂ 21.17 ಕೋಟಿ ಅನುದಾನಕ್ಕೆ ಡಿಪಿಆರ್ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈಗ ಎರಡನೇ ಹಂತದಲ್ಲಿ ಮೈಸೂರಿನ ನಗರದ ಹೃದಯ ಭಾಗದಲ್ಲಿರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯವಾಗಿ ಅಭಿವೃದ್ಧಿ ಮಾಡಲು ಮೈಸೂರು ರಾಜರು, ದಿವಾನರು, ಆಡಳಿತಗಾರರು ನೀಡಿರುವ ಆಡಳಿತ ಸುಧಾರಣೆ, ಕೊಡುಗೆಗಳು, ಮೈಸೂರು ಗತವೈಭವ ಹಾಗೂ ಪರಂಪರೆಯನ್ನು ಬಿಂಬಿಸುವ ರೀತಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ, ಸ್ಥಳೀಯ ಪ್ರವಾಸೋದ್ಯಮ ಸಕ್ರ್ಯೂಟ್ ಮತ್ತು ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮೈಸೂರು ಇತಿಹಾಸ, ರಾಜ ಪರಂಪರೆ ಹಾಗೂ ಗತಾ ವೈಭವ ಬಿಂಬಿಸುವ ಅನುಸಾರ ಡಿಪಿಆರ್ ಸಿದ್ಧಪಡಿಸಿಲು ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಮೈಸೂರು ವಿಭಾಗದ ಉಪ ಅರಣ್ಯಾಧಿಕಾರಿಗಳಾದ ಡಾ. ಬಸವರಾಜು, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್, ಅರಮನೆ ಮಂಡಳಿಯ ಉಪ ನಿರ್ದೇಶಕರಾದ ಟಿ.ಎಸ್ ಸುಬ್ರಹ್ಮಣ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕೆ.ಸಿ.ನಾರಾಯಣಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…