ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ.
ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್ 12 ರಂದು ಚಾಲನೆ ನೀಡಲಿದ್ದಾರೆ.
ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿದಿನ ಈ ರೈಲು ಸೇವೆ ಇರಲಿದೆ.
ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಂಡ್ಯ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಮತ್ತು ಕಟಪಾಡಿಯಲ್ಲಿ ನಿಲುಗಡೆ ಹೊಂದಿದೆ.
ಚೆನ್ನೈನಿಂದ ಹಿಂದಿರುಗುವಾಗ, ರೈಲು ಸಂಖ್ಯೆ 20664 ಚೆನ್ನೈನಿಂದ ಸಂಜೆ 5 ಗಂಟೆಗೆ ಹೊರಟು ಪ್ರತಿದಿನ ರಾತ್ರಿ 11.20 ಕ್ಕೆ ಮೈಸೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿ ದಿನ ಈ ರೈಲು ಸಂಚಾರ ಇರಲಿದೆ. ಇದು ಕಟಪಾಡಿ, ಕೃಷ್ಣರಾಜಪುರಂ, ಎಸ್‌ಎಂವಿಟಿ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಈ ವರ್ಷ ಮಾರ್ಚ್ 8 ರಂದು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪ್ರತಾಪ್ ಸಿಂಹ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗಳನ್ನು ಮೈಸೂರಿನಿಂದಲೇ ನೇರವಾಗಿ ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.
ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿದ ಮಾಹಿತಿ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯು ಏಪ್ರಿಲ್ 5 ರಿಂದ ಆರಂಭವಾಗಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…