ಮೈಸೂರು

ಮೈಸೂರು-ಚೆನ್ನೈ ನಡುವೆ ಸಂಚರಿಸಲಿದೆ ಎರಡನೇ ವಂದೇ ಭಾರತ್‌ ರೈಲು

ಮೈಸೂರು: ಮೈಸೂರು-ಚನ್ನೈ ನಡುವಿನ ಎರಡನೇ ವಂದೇ ಭಾರತ್‌ ರೈಲು ಶ್ರೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ.

ಈ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮೂರು ನಗರಗಳ ಮೂಲಕ ಸಂಚಾರ ಮಾಡಲಿದೆ. ಈ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮಾರ್ಚ್‌ 12 ರಂದು ಚಾಲನೆ ನೀಡಲಿದ್ದಾರೆ.

ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಡಲಿದೆ ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿದಿನ ಈ ರೈಲು ಸೇವೆ ಇರಲಿದೆ.

ನೂತನ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಮಂಡ್ಯ, ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ, ಕೃಷ್ಣರಾಜಪುರಂ, ಮತ್ತು ಕಟಪಾಡಿಯಲ್ಲಿ ನಿಲುಗಡೆ ಹೊಂದಿದೆ.

ಚೆನ್ನೈನಿಂದ ಹಿಂದಿರುಗುವಾಗ, ರೈಲು ಸಂಖ್ಯೆ 20664 ಚೆನ್ನೈನಿಂದ ಸಂಜೆ 5 ಗಂಟೆಗೆ ಹೊರಟು ಪ್ರತಿದಿನ ರಾತ್ರಿ 11.20 ಕ್ಕೆ ಮೈಸೂರು ತಲುಪಲಿದೆ. ಬುಧವಾರ ಹೊರತುಪಡಿಸಿ ಪ್ರತಿ ದಿನ ಈ ರೈಲು ಸಂಚಾರ ಇರಲಿದೆ. ಇದು ಕಟಪಾಡಿ, ಕೃಷ್ಣರಾಜಪುರಂ, ಎಸ್‌ಎಂವಿಟಿ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ವರ್ಷ ಮಾರ್ಚ್​ 8 ರಂದು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಲ್ಲಿಸಿದ ಪ್ರಸ್ತಾವನೆಯಲ್ಲಿ ಪ್ರತಾಪ್ ಸಿಂಹ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗಳನ್ನು ಮೈಸೂರಿನಿಂದಲೇ ನೇರವಾಗಿ ಪ್ರಾರಂಭಿಸುವಂತೆ ಒತ್ತಾಯಿಸಿದ್ದರು.

ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿದ ಮಾಹಿತಿ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವೆ ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್ ಸೇವೆಯು ಏಪ್ರಿಲ್ 5 ರಿಂದ ಆರಂಭವಾಗಲಿದೆ.

andolanait

Recent Posts

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

15 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

15 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

16 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

16 hours ago

ಓದುಗರ ಪತ್ರ: ‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…

16 hours ago

ಓದುಗರ ಪತ್ರ: ನೀಲಿಯೆಂದರೇನು?!

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…

16 hours ago