ಮೈಸೂರು

ಹೆಚ್ಚಿನ ಬೆಲೆಗೆ ಅಡುಗೆ ಎಣ್ಣೆ ಮಾರಾಟ; ದೂರು

ಮೈಸೂರು: ನಿಗದಿತ ಬೆಲೆಗಿಂತ ೬೦ ರೂ. ಹೆಚ್ಚುವರಿ ದರಕ್ಕೆ ಅಡುಗೆ ಎಣ್ಣೆ ಮಾರಾಟ ಮಾಡಿದ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್ ವಿರುದ್ಧ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿಯ ಬಳಿ ಇರುವ ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್‌ನಲ್ಲಿ ಸನ್ ಪ್ಯೂರ್ ಅಡುಗೆ ಎಣ್ಣೆಯನ್ನು ಮುಖಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಾರೆ ಎಂದು ಗ್ರಾಮದ ಯುವಕ ಎಂ. ಸುರೇಶ್ ಎಂಬವರು ಗ್ರಾಹಕರ ರಕ್ಷಣಾ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ಅ. ೧೯ರಂದು ಸುರೇಶ್ ಅವರು ಎಸ್‌ಎಸ್‌ಜಿ ಸೂಪರ್ ಮಾರ್ಕೆಟ್‌ನಲ್ಲಿ ೪ ಲೀಟರ್ ಅಡುಗೆ ಎಣ್ಣೆ ಖರೀದಿಸಿದ್ದಾರೆ. ಅಂಗಡಿ ಮಾಲೀಕ ಪ್ರತಿ ಲೀಟರಿಗೆ ೧೪೫ ರೂ. ನಂತೆ ೪ ಲೀಟರ್‌ಗೆ ೫೮೦ ರೂ. ಗಳನ್ನು ಪಾವತಿಸುವಂತೆ ಹೇಳಿದ್ದಾರೆ. ಆದರೆ, ಒಂದು ಲೀಟರ್ ಅಡುಗೆ ಎಣ್ಣೆಗೆ ೧೩೦ ರೂ. ಮುಖಬೆಲೆ ಇದ್ದು, ಅದರಂತೆ ಮಾರಾಟ ಮಾಡದೆ ಹೆಚ್ಚಿನ ದರಕ್ಕೆ ಏಕೆ ಮಾರಾಟ ಮಾಡುತ್ತಿದ್ದೀರಿ ಎಂದು ಸುರೇಶ್ ಪ್ರಶ್ನಿಸಿದ್ದಾರೆ.

ಇಷ್ಟವಿದ್ದರೆ ತೆಗೆದುಕೊಳ್ಳಿ, ನಾನು ಮಾರಾಟ ಮಾಡುವುದು ಇದೇ ಬೆಲೆಗೆ, ಊರಿನವರೆಲ್ಲರೂ ಇಷ್ಟೇ ಬೆಲೆ ಕೊಟ್ಟು ತೆಗೆದುಕೊಳ್ಳುವುದು ಎಂದು ಗದರುವುದರ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಮಾನಸಿಕ ಹಾಗೂ ಆರ್ಥಿಕ ನಷ್ಟ ಅನುಭವಿಸಿದ ಸುರೇಶ್ ಗ್ರಾಹಕರಿಗೆ ಮೋಸ ಮಾಡಿದ ಆರೋಪದಡಿ ದೂರು ದಾಖಲಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

22 mins ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

40 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

51 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

1 hour ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

1 hour ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

2 hours ago