ಮೈಸೂರು

ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರು ಸಾವು

ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನದಲ್ಲಿ ತುಂಬಿಸಿದ್ದ ಕಬ್ಬಿಣದ ರಾಡ್‌ಗಳು ಪುಟ್ಟೇಗೌಡ ಅವರ ಮೇಲೆ ಬಿದ್ದು, ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ್ ಕಶ್ಯಪ್ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣ: ಬುಧವಾರ ರಾತ್ರಿ ಶುಂಠಿ ತುಂಬಿಸಿಕೊಂಡು ತೆರಳುತ್ತಿದ್ದ ಜೀಪ್ ಚಾಲಕನ ಹತೋಟಿ ತಪ್ಪಿ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಲ್ಕುಣಿಕೆ ನಿವಾಸಿ ಶಿವರಾಜು (೨೨) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

6 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

7 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

8 hours ago