ಮೈಸೂರು: ಮಹಿಳೆಯರಿಗಾಗಿ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಬೆಂಬಲ ನೀಡಲಾಗುತ್ತಿದೆ. ಹೊಸದಾಗಿ ನಿರ್ಮಾಣಗೊಂಡ ಈ ಮಾರುಕಟ್ಟೆ ಕೇಂದ್ರ, ಮಾರ್ಚ್ 28ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 62ನೇ ವಾರ್ಡಿನ ವಿದ್ಯಾರಣ್ಯಪುರಂ ಬಡಾವಣೆಯಲ್ಲಿಆಯೋಜಿಸಿದ್ದ ‘ಯೋಗಕ್ಷೇಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡುವ ನಿಟ್ಟಿನಲ್ಲಿ9 ಕೋಟಿ ರೂ. ವೆಚ್ಚದಲ್ಲಿಬಲ್ಲಾಳ್ ವೃತ್ತದಲ್ಲಿಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಾರ್ಚ್ 28ರಂದು ಉದ್ಘಾಟನೆಯಾಗುತ್ತಿದೆ. ಇದರೊಂದಿಗೆ ಇಂದಿನ ತಲೆಮಾರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿಸರಸ್ವತಿಪುರಂ ಬಡಾವಣೆಯಲ್ಲಿ4 ಕೋಟಿ ರೂ. ವೆಚ್ಚದಲ್ಲಿದೊಡ್ಡ ಗ್ರಂಥಾಲಯ ಸ್ಥಾಪನೆ ಆಗುತ್ತಿದ್ದು, ಅದಕ್ಕೂ ಸದ್ಯದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು,ಎಂದರು.
ಪ್ರಾಣಿಗಳಿಗೆ ಪುನರ್ವಸತಿ ಕೇಂದ್ರ : ಮನುಷ್ಯರಿಗೆ ಮಾತ್ರವಲ್ಲ ಬೀದಿ ನಾಯಿಗಳು ಹಾಗೂ ಕೋತಿಗಳು ಕೂಡ ಗೌರವಯುತ ಬದುಕು ಸಾಗಿಸಬೇಕೆನ್ನುವ ಆಶಯದಿಂದ ಅವುಗಳಿಗಾಗಿ ಸುಸಜ್ಜಿತವಾದ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ ಮಾರ್ಚ್ 25ರಂದು ನಾಯಿಗಳ ಪುನರ್ವಸತಿ ಕೇಂದ್ರ ಲೋಕಾರ್ಪಣೆ ಆಗಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡರು.ಕ್ಷೇತ್ರದಲ್ಲಿರುವ ತುಳಸೀದಾಸ್ ದಾಸಪ್ಪ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆ ಖಾಸಗಿ ಆಸ್ಪತ್ರೆಗೆ ಸರಿಸಾಟಿಯಾಗಿ ನಿರ್ಮಿಸಲಾಗಿದೆ. ನಿರೀಕ್ಷೆ ಮೀರಿದ ಸೇವೆ ದೊರೆಯುತ್ತಿದೆ. ಪರಿಣಾಮ, ಜಯನಗರ ಆಸ್ಪತ್ರೆಗೆ ಕೇಂದ್ರ ಸರಕಾರದಿಂದ 36 ಲಕ್ಷ ರೂ. ಬಹುಮಾನ ಬಂದಿದೆ. ಅದು ಒಂದು ದಾಖಲೆಯಾಗಿದೆ ಎಂದರು.
ನಂಬರ್ ಒನ್ ಕ್ಷೇತ್ರ : ಅಂದುಕೊಂಡಂತೆ ಕಳೆದ ಐದು ವರ್ಷಗಳಲ್ಲಿಗರಿಷ್ಠ ಪ್ರಮಾಣದ ಕಾರ್ಯಯೋಜನೆ ರೂಪಿಸಿ ಅನುಷ್ಠಾನ ಮಾಡುವ ಮೂಲಕ ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿಮ್ಮೆಲ್ಲರ ವಿಶ್ವಾಸ, ಪ್ರೀತಿ, ಸಹಕಾರವೇ ಕಾರಣವಾಗಿದೆ. ಇಡೀ ಕ್ಷೇತ್ರವನ್ನು ಬೋರ್ವೆಲ್ ಮುಕ್ತ ಮಾಡಲಾಗಿದೆ. 482 ಕಿ.ಮೀ. ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಲಾಗಿದೆ. ರಾಜಕಾಲುವೆ, ಯುಜಿಡಿ, ಮಳೆ ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ ಎಂದರು.1994ರಿಂದ ಈವರೆಗೆ ನಾನು ಕ್ಷೇತ್ರದಲ್ಲಿಹಣ, ಹೆಂಡ ಹಂಚಿಲ್ಲ. ನಿಮ್ಮೆಲ್ಲರ ವಿಶ್ವಾಸದಿಂದ ಆಯ್ಕೆಯಾಗುತ್ತಾ ಬಂದಿದ್ದೇನೆ. ನಿಮ್ಮ ಋುಣ ನನ್ನ ಮೇಲಿದೆ. ಅದನ್ನು ಕಾಯಾ, ವಾಚಾ, ಮನಸ್ಪೂರಕವಾಗಿ ತೀರಿಸುತ್ತ ಬಂದಿದ್ದೇನೆ. ಇದೀಗ ಮತ್ತೆ ಚುನಾವಣೆ ಎದುರಾಗಿದ್ದು, ಯಾವುದೇ ರೀತಿಯ ಖರ್ಚಿಲ್ಲದೆ ಈ ಚುನಾವಣೆ ನಡೆಸುವ ಮೂಲಕ ಹೊಸ ಭಾಷ್ಯ ಬರೆಯೋಣ. ತತ್ವಾದರ್ಶಗಳನ್ನು ಇಟ್ಟುಕೊಂಡು ರಾಜಕೀಯ ಬದುಕು ನಡೆಸಿದ್ದೇನೆ. ಆ ಬಗ್ಗೆ ಮೈಸೂರಿನ ಜನರಿಂದ ರಾಷ್ಟ್ರವ್ಯಾಪಿ ನಾಯಕರಿಗೂ ತಿಳಿದಿದೆ. ಅದು ಹಲವಾರು ದೊಡ್ಡ ದೊಡ್ಡ ವೇದಿಕೆಯಲ್ಲಿ ಚರ್ಚೆ ಆಗಿದೆ. ಅದು ನನ್ನೊಬ್ಬನಿಗೆ ಸಂದ ಗೌರವ ಅಲ್ಲ. ಇಡೀ ಕೃಷ್ಣರಾಜ ಕ್ಷೇತ್ರಕ್ಕೆ ಸಂದ ಗೌರವ ಎಂದರು.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…