ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ.
ಪ್ರಶಾಂತನಿಗೆ ಸಾಥ್ ನೀಡಲು ಕುಮ್ಕಿ ಆನೆಗಳಾಗಿ ರೂಪ ಹಾಗೂ ಕಾವೇರಿ ಸಜ್ಜಾಗಿವೆ. ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ಈ ವೈಭವದ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಪ್ರಶಾಂತನ ನೇತೃತ್ವದಲ್ಲಿ ಸಾಗಲಿರುವ ಜಂಬೂಸವಾರಿಗೆ ಅರಮನೆ ನಗರಿ ಸಜ್ಜಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಬಹುನಿರೀಕ್ಷಿತ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಾಂತ ಆನೆಗೆ ಅಂಬಾರಿ ಕಟ್ಟುವ ಕಾರ್ಯ ಮುಗಿದಿದ್ದು, ನಾಡದೇವತೆ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಲು ಪ್ರಶಾಂತ ಸಜ್ಜಾಗಿದ್ದಾನೆ.
ಪ್ರಶಾಂತನ ಎರಡೂ ಬದಿಗಳಲ್ಲಿ ಕುಮ್ಕಿ ಆನೆಗಳಾಗಿ ರೂಪ ಹಾಗೂ ಕಾವೇರಿ ಸಾಥ್ ನೀಡಲಿವೆ. ಚಿನ್ನದ ಅಂಬಾರಿಯನ್ನು ಸುರಕ್ಷಿತವಾಗಿ ಕಟ್ಟುವ ಕಾರ್ಯವನ್ನು ಸಿಬ್ಬಂದಿ ಎಚ್ಚರಿಕೆಯಿಂದ ನೆರವೇರಿಸುತ್ತಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ಬಳಿಕ ಪ್ರಶಾಂತ ಚಿನ್ನದ ಅಂಬಾರಿ ಹೊತ್ತು ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿದ್ದಾನೆ.
ಭಕ್ತಿ, ಪರಂಪರೆ ಮತ್ತು ರಾಜವೈಭವ ಮೇಳೈಸುವ ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಮೊದಲ ಬಾರಿಗೆ ಅಂಬಾರಿ ಹೊರುತ್ತಿರುವ ಪ್ರಶಾಂತನತ್ತ ಎಲ್ಲರ ಚಿತ್ತ ನೆಟ್ಟಿದ್ದು, ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಮತ್ತಷ್ಟು ಹೆಚ್ಚಿದೆ.




